ದೇಶ

ಕಾಶ್ಮೀರದಲ್ಲಿ ಒಂದು ತಿಂಗಳು ಇಂಟರ್ ನೆಟ್ ಸೇವೆ ಸ್ಥಗಿತ

Lingaraj Badiger
ಶ್ರೀನಗರ: ಹಿಂಸಾಚಾರ ಪೀಡಿತ ಕಣಿವೆ ರಾಜ್ಯದಲ್ಲಿ ಒಂದು ತಿಂಗಳು ಅಥವಾ ಮುಂದಿನ ಆದೇಶದವರೆಗೆ ಇಂಟರ್ ನೆಟ್ ಸೇವೆಯನ್ನು ಅಮಾನತುಗೊಳಿಸಿ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಒಂದು ತಿಂಗಳು ಅಥವಾ ಮುಂದಿನ ಆದೇಶದವರೆಗೆ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸುವಂತೆ ಗೃಹ ಇಲಾಖೆ ಆದೇಶ ಹೊರಡಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ದೂರವಾಣಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ. ಆದರೆ ಸಂಪೂರ್ಣ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆಯೇ ಅಥವಾ ಈಗಾಗಲೇ ಏಪ್ರಿಲ್ 17ರಿಂದ ಸ್ಥಗಿತಗೊಂಡಿರುವ ಮೊಬೈಲ್ ಇಂಟರ್ ನೆಟ್ ಮಾತ್ರನಾ ಎಂಬ ಬಗ್ಗೆ ತಕ್ಷಣಕ್ಕೆ ಮಾಹಿತಿ ಲಭ್ಯವಾಗಿಲ್ಲ ಎಂದು ಅವರು ಹೇಳಿದ್ದಾರೆ.
ಸೇನೆ ವಿರುದ್ಧದ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಳೆದ ಸೋಮವಾರದಿಂದ ರಾಜ್ಯ ಸರ್ಕಾರ ಮೊಬೈಲ್ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಿತ್ತು.
SCROLL FOR NEXT