ಸ್ಥಳೀಯ ಸಂಸ್ಥೆ ಚುನಾವಣೆಯ ಗೆಲುವು: ದೆಹಲಿ ಜನತೆಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ
ದೆಹಲಿಯ ಮೂರು ಮಹಾನಗರ ಪಾಲಿಕೆಗಳ ಚುನವಾಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಪಕ್ಷದ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಜನತೆಗೆ ಧನ್ಯವಾದ ತಿಳಿಸಿದ್ದಾರೆ.
ನವದೆಹಲಿ: ದೆಹಲಿಯ ಮೂರು ಮಹಾನಗರ ಪಾಲಿಕೆಗಳ ಚುನವಾಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಪಕ್ಷದ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಜನತೆಗೆ ಧನ್ಯವಾದ ತಿಳಿಸಿದ್ದಾರೆ.
ಪಕ್ಷದ ಮೇಲೆ ನಂಬಿಕೆ ಇಟ್ಟಿರುವ ದೆಗಲಿ ಜನತೆಗೆ ಪ್ರಧಾನಿ ಮೋದಿ ಧನ್ಯವಾದ ತಿಳಿಸಿ ಟ್ವೀಟ್ ಮಾಡಿದ್ದಾರೆ. ಇದೇ ವೇಳೆ ದೆಹಲಿ ಬಿಜೆಪಿಯ ಕಠಿಣ ಪರಿಶ್ರಮಕ್ಕೂ ಮೆಚ್ಚುಗೆ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ದೆಹಲಿ ಬಿಜೆಪಿಯ ಪರಿಶ್ರಮದಿಂದ ಈ ಗೆಲುವು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.
ದೆಹಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿದ್ದು, ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ. ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ಇವಿಎಂ ನ್ನು ದುರ್ಬಳಕೆ ಮಾಡಿಕೊಂಡು ಬಿಜೆಪಿ ಗೆದ್ದಿದೆ ಎಂದು ಆರೋಪಿಸಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.