ಹಣಕಾಸು ಮಾಜಿ ಸಚಿವ ಯಶವಂತ್ ಸಿನ್ಹಾ
ಮುಂಬೈ: ಜಮ್ಮು ಮತ್ತು ಕಾಶ್ಮೀರ ಸಮಸ್ಯ ಬಗೆಹರಿಕೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮದೇ ಆದ ತಂತ್ರವನ್ನು ಹೊಂದಿದ್ದಾರೆಂದು ಬಿಜೆಪಿ ಬುಧವಾರ ಭರವಸೆ ನೀಡಿದೆ.
ಈ ಕುರಿತಂತೆ ಮಾತನಾಡಿರುವ ಬಿಜೆಪಿ ನಾಯಕ ಎಸ್. ಪ್ರಕಾಶ್ ಅವರು, ಹಣಕಾಸು ಮಾಜಿ ಸಚಿವ ಯಶವಂತ್ ಸಿನ್ಹಾ ಅವರ ಉದ್ದೇಶ ಶ್ರೇಷ್ಠವಾದದ್ದು. ಆದರೆ, ಅವರು ತಮ್ಮದೇ ಆದ ಗುರಿಯನ್ನು ಹೊಂದಿದ್ದಾರೆ. ಇದರಂತೆ ಜಮ್ಮು ಮತ್ತು ಕಾಶ್ಮೀರ ಸಮಸ್ಯೆ ಬಗೆಹರಿಕೆಗೆ ಭಾರತ ಸರ್ಕಾರ ಕೂಡ ತನ್ನದೇ ಆದ ಆದ್ಯತೆ ಹಾಗೂ ಕಾರ್ಯತಂತ್ರಗಳನ್ನು ಹೊಂದಿದೆ ಎಂದು ಹೇಳಿದ್ದಾರೆ.
ಸಿನ್ಹಾ ಅವರ ಹೇಳಿಕೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅಥವಾ ಪ್ರಧಾನಮಂತ್ರಿ ಕಚೇರಿಯಿಂದ ಯಾರಾದರೂ ಪ್ರತಿಕ್ರಿಯೆ ನೀಡುತ್ತಾರೆಂಬ ವಿಶ್ವಾಸ ನನಗಿದೆ ಎಂದು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರ ಕುರಿತಂತೆ ಪ್ರತಿಕ್ರಿಯೆ ನೀಡಿದ್ದ ಹಣಕಾಸು ಮಾಜಿ ಸಚಿವ ಯಶವಂತ್ ಸಿನ್ಹಾ ಅವರು, ಜಮ್ಮು ಮತ್ತು ಕಾಶ್ಮೀರ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಕೂಡಲೇ ಮಾತುಕತೆಯನ್ನು ನಡೆಸಬೇಕೆಂದು ಹೇಳಿದ್ದರು.