ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ನವದೆಹಲಿ: ಸುಕ್ಮಾ ದಾಳಿಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಕೇಂದ್ರದ ನಕ್ಸಲ್ ವಿರೋಧಿ ತಂತ್ರದ ವಿರುದ್ಧ ಕಿಡಿಕಾರಿದ್ದಾರೆ.
ಸುಕ್ಮಾ ನಕ್ಸಲ್ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಈ ಹಿಂದೆ ಕೇಂದ್ರ ಸರ್ಕಾರ ನಕ್ಸಲರನ್ನು ಹಾಗೂ ಅವರ ಕಾರ್ಯ ಚಟುವಟಿಕೆಗಳನ್ನು ಬಗ್ಗುಬಡೆಯಲು ರೂ.500 ಹಾಗೂ 1,000 ದುಬಾರಿ ನೋಟುಗಳ ಮೇಲೆ ನಿಷೇಧ ಹೇರಿತ್ತೆಂದು ಕೇಳಿದ್ದೆ. ಇದೀಗ ಎಡಪಂಥೀಯ ಉಗ್ರಗಾಮಿಗಳ ವಿರುದ್ಧ ತಂತ್ರವನ್ನು ರೂಪಿಸಿದೆ. ಈ ತಂತ್ರ ಪರಿಣಾಮಕಾರಿಯಾಗಲಿದೆ ಎಂದು ನಂಬಿದ್ದೇನೆಂದು ಹೇಳಿದ್ದಾರೆ.
ಛತ್ತೀಸ್ಗಢ ರಾಜ್ಯದ ಸುಕ್ಮಾದ ರಸ್ತೆಯೊಂದರಲ್ಲಿ ಕಾರ್ಮಿಕರು ಕಾಮಗಾರಿ ಕಾರ್ಯವನ್ನು ಮಾಡುತ್ತಿದ್ದರು ಈ ವೇಳೆ 150ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಕಾರ್ಮಿಕರಿಗೆ ಭದ್ರತೆಯನ್ನು ಒದಗಿಸುತ್ತಿದ್ದರೆ. ಈ ವೇಳೆ ಸ್ಥಳಕ್ಕೆ ಬಂದ 300ಕ್ಕೂ ಹೆಚ್ಚು ನಕ್ಸಲರು ಏಕಾಏಕಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ 25 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು.