ಕುಪ್ವಾರ ಸೇನಾ ನೆಲೆ ಮೇಲೆ ಉಗ್ರರ ದಾಳಿ: ಮೂವರು ಯೋಧರು ಹುತಾತ್ಮ
ಕಾಶ್ಮೀರದ ಕುಪ್ವಾರ ಜಿಲ್ಲೆಯ ಸೇನಾ ಶಿಬಿರದ ಮೇಲೆ ಗುರುವಾರ ಬೆಳಗ್ಗೆ ಉಗ್ರರು ನಡೆಸಿದ ದಾಳಿಯ ಪರಿಣಾಮ ಮೂವರು ಯೋಧರು ಹುತಾತ್ಮರಾಗಿದ್ದಾರೆ....
ಕುಪ್ವಾರ: ಕಾಶ್ಮೀರದ ಕುಪ್ವಾರ ಜಿಲ್ಲೆಯ ಸೇನಾ ಶಿಬಿರದ ಮೇಲೆ ಗುರುವಾರ ಬೆಳಗ್ಗೆ ಉಗ್ರರು ನಡೆಸಿದ ದಾಳಿಯ ಪರಿಣಾಮ ಮೂವರು ಯೋಧರು ಹುತಾತ್ಮರಾಗಿದ್ದಾರೆ.
ಫಿಯಾದೀನ್ ಉಗ್ರರ ದಾಳಿಯಿಂದ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಿರಿಯ ಸೇನಾ ಅಧಿಕಾರಿ ಸೇರಿದಂತೆ ಮೂವರು ಬಲಿಯಾಗಿದ್ದಾರೆ.
ಇನ್ನೂ ಭಾರತೀಯ ಸೈನಿಕರ ಪ್ರತಿದಾಳಿಗೆ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ . ಅಡಗಿ ಕುಳಿತಿರುವ ಮತ್ತಷ್ಟಪ ಉಗ್ರರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಕಾರ್ಯಾಚರಣೆ ಮುಂದುವರಿದಿದ್ದು , ಮತ್ತಷ್ಟು ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.