ಸುಕ್ಮಾ ದಾಳಿ: ಮಾವೋವಾದಿಗಳ ಸಾವಿನ ಸಂಖ್ಯೆ 11ಕ್ಕೆ ಏರಿಕೆ
ಸುಕ್ಮಾ ಜಿಲ್ಲೆಯ ಬುರ್ಕಾಪಾಲ್ ನಲ್ಲಿ ನಡೆದ ದಾಳಿಯಲ್ಲಿ ಸಾವಿಗೀಡಾದ ಮಾವೋವಾದಿಗಳ...
ಸುಕ್ಮಾ(ಛತ್ತೀಸ್ ಗಢ): ಸುಕ್ಮಾ ಜಿಲ್ಲೆಯ ಬುರ್ಕಾಪಾಲ್ ನಲ್ಲಿ ನಡೆದ ದಾಳಿಯಲ್ಲಿ ಸಾವಿಗೀಡಾದ ಮಾವೋವಾದಿಗಳ ಸಂಖ್ಯೆ 11ಕ್ಕೇರಿದೆ.
ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಪೊಲೀಸರು ಮತ್ತು ಮಾವೋವಾದಿಗಳ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ 10 ಮಾವೋವಾದಿಗಳು ಮೃತಪಟ್ಟು 5 ಮಂದಿ ಗಾಯಗೊಂಡಿದ್ದರು.
ಸೋಮವಾರ ಬೆಳಗ್ಗೆ ಸುಕ್ಮಾದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಮಾವೋವಾದಿಗಳ ಮಧ್ಯೆ ನಡೆದ ಎನ್ ಕೌಂಟರ್ ನಲ್ಲಿ 25 ಪೊಲೀಸ್ ಸಿಬ್ಬಂದಿ ಮೃತಪಟ್ಟು 5 ಮಂದಿ ಗಾಯಗೊಂಡಿದ್ದರು. ಜಿಲ್ಲೆಯಲ್ಲಿ ರಸ್ತೆ ನಿರ್ಮಾಣ ಮತ್ತು ಸ್ವಚ್ಛತಾ ಚಟುವಟಿಕೆಗಳಲ್ಲಿ ಸ್ಥಳೀಯರಿಗೆ ಸಹಾಯ ಮಾಡುತ್ತಿದ್ದ ವೇಳೆ ಸಿಆರ್ ಪಿಎಫ್ ನ 7 4ನೇ ಬಟಾಲಿಯನ್ ಸಿಬ್ಬಂದಿ ಮೇಲೆ ಮಾವೋವಾದಿಗಳು ಏಕಾಏಕಿ ದಾಳಿ ನಡೆಸಿದ್ದರು.
ಸುಕ್ಮಾದಲ್ಲಿನ ದಾಳಿಯನ್ನು ಕೇಂದ್ರ ಸರ್ಕಾರ ತೀವ್ರವಾಗಿ ಖಂಡಿಸಿದ್ದು ರಕ್ತದ ಕೊಲೆಯ ಹಿಂದಿನ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.