ಸಂಗ್ರಹ ಚಿತ್ರ 
ದೇಶ

ಆಂಧ್ರ ಪ್ರದೇಶದಲ್ಲಿ ದೋಣಿ ದುರಂತ: 8 ಮಂದಿ ಸಾವು, 5 ಮಂದಿ ನಾಪತ್ತೆ!

ಆಂಧ್ರ ಪ್ರದೇಶದ ಅನಂತಪುರದಲ್ಲಿ ಭೀಕರ ದೋಣಿ ದುರಂತ ಸಂಭವಿಸಿದ್ದು, ದೋಣಿಯಲ್ಲಿದ್ದ 15 ಮಂದಿಯ ಪೈಕಿ 13 ಮಂದಿ ನೀರಿನಲ್ಲಿ ಮುಳುಗಿರುವ ಘಟನೆ ಶನಿವಾರ ನಡೆದಿದೆ.

ಅನಂತಪುರ: ಆಂಧ್ರ ಪ್ರದೇಶದ ಅನಂತಪುರದಲ್ಲಿ ಭೀಕರ ದೋಣಿ ದುರಂತ ಸಂಭವಿಸಿದ್ದು, ದೋಣಿಯಲ್ಲಿದ್ದ 15 ಮಂದಿಯ ಪೈಕಿ 13 ಮಂದಿ ನೀರಿನಲ್ಲಿ ಮುಳುಗಿರುವ ಘಟನೆ ಶನಿವಾರ ನಡೆದಿದೆ.

ಅನಂತಪುರದ ಗುಂಟಕಲ್ ನಲ್ಲಿರುವ ಯೆರ್ರ ತಿಮ್ಮರಾಜು ಕೆರೆಯಲ್ಲಿ ದೋಣಿ ಮುಳುಗಡೆಯಾಗಿದ್ದು, ದೋಣಿಯಲ್ಲಿ ಸುಮಾರು 15 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ, ಈ ಪೈಕಿ 13 ಮಂದಿ ಮುಳುಗಡೆಯಾಗಿದ್ದು,  ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭರದಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ವರೆಗೂ 8 ಮಂದಿಯ ಶವಗಳನ್ನು ಹೊರಕ್ಕೆ ತೆಗೆಯಲಾಗಿದ್ದು, ಉಳಿದ 5 ಮಂದಿಗಾಗಿ  ತೀವ್ರ ಶೋಧ ನಡೆಸಲಾಗುತ್ತಿದೆ.

15 ಮಂದಿ ಪ್ರಯಾಣಿಕರ ಪೈಕಿ 6 ಮಂದಿ ಮಕ್ಕಳು ಮತ್ತು 5 ಮಂದಿ ಮಹಿಳೆಯರೂ ಇದ್ದರು ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಚಂದ್ರಬಾಬು ನಾಯ್ಡು ಅವರು ಆಘಾತ ವ್ಯಕ್ತಪಡಿಸಿದ್ದು, ಪ್ರಕರಣ ಸಂಬಂಧ  ತನಿಖೆಗೆ ಆದೇಶ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

SCROLL FOR NEXT