ಬಿಜಾಪುರ (ಛತ್ತೀಸ್ಗಢ): ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರನ್ನು ಸಿಆರ್'ಪಿಎಫ್ ಯೋಧರು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ.
ಸುಕ್ಮಾ ನಕ್ಸಲ್ ದಾಳಿಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ನಕ್ಸಲರ ವಿರುದ್ಧದ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿತ್ತು. ಇದರಂತೆ ಬಿಜಾಪುರದಲ್ಲಿ ಇಂದು ನಡೆಸಲಾದ ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲರನ್ನು ಬಂಧನಕ್ಕೊಳಪಡಿಸಿದ್ದಾರೆ.
ಛತ್ತೀಸ್ಗಢ ರಾಜ್ಯದ ಸುಕ್ಮಾದ ರಸ್ತೆಯೊಂದರಲ್ಲಿ ಕಾರ್ಮಿಕರು ಕಾಮಗಾರಿ ಕಾರ್ಯವನ್ನು ಮಾಡುತ್ತಿದ್ದರು ಈ ವೇಳೆ 150ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಕಾರ್ಮಿಕರಿಗೆ ಭದ್ರತೆಯನ್ನು ಒದಗಿಸುತ್ತಿದ್ದರೆ. ಈ ವೇಳೆ ಸ್ಥಳಕ್ಕೆ ಬಂದ 300ಕ್ಕೂ ಹೆಚ್ಚು ನಕ್ಸಲರು ಏಕಾಏಕಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ 25 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು.