ದೇಶ

ಮುಂದಿನ 2 ವರ್ಷಗಳಲ್ಲಿ ನೌಕರರ ಭವಿಷ್ಯನಿಧಿ ಸಂಸ್ಥೆಯಿಂದ 10 ಲಕ್ಷ ಮನೆಗಳ ನಿರ್ಮಾಣ: ಬಂಡಾರು ದತ್ತಾತ್ರೇಯ

Sumana Upadhyaya
ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಘ ನಗರಾಭಿವೃದ್ಧಿ ಸಚಿವಾಲಯ ಜೊತೆ ಸೇರಿ ಮುಂದಿನ ಎರಡು ವರ್ಷಗಳಲ್ಲಿ 10 ಲಕ್ಷ ಮನೆಗಳನ್ನು ನಿರ್ಮಿಸಲಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ತಿಳಿಸಿದ್ದಾರೆ.
2022ರ ವೇಳೆಗೆ ಎಲ್ಲರಿಗೂ ಮನೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಆಶಯವನ್ನು ಈಡೇರಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಈ ಬಗ್ಗೆ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಸಚಿವ ದತ್ತಾತ್ರೇಯ, ನಾವು ಗುಂಪು ವಿಮಾ ಮನೆ ಯೋಜನೆಯನ್ನು ಆರಂಭಿಸಿದ್ದು ನೌಕರರ ಭವಿಷ್ಯ ನಿಧಿ ಚಂದಾದಾರರಿಗೆ ಹಂತ ಹಂತವಾಗಿ ಮನೆಗಳನ್ನು ನಿರ್ಮಿಸಿ ಕೊಡಲಾಗುವುದು. ಮನೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರಗಳು ಭೂಮಿ ಒದಗಿಸಬೇಕೆಂದು ಅವರು ಒತ್ತಾಯಿಸಿದರು.
ಆರ್ಥಿಕವಾಗಿ ಹಿಂದುಳಿದವರಿಗೆ ಯೋಜನೆಗಳ ಫಲಾನುಭವಿಗಳಿಗೆ ಬಡ್ಡಿ ಸಬ್ಸಿಡಿಯಾಗಿ 2.2 ಲಕ್ಷ ರೂಪಾಯಿಗಳನ್ನು ಒದಗಿಸಲು ನಗರಾಭಿವೃದ್ಧಿ ಸಚಿವಾಲಯ ಜೊತೆ ಮಾತುಕತೆ ನಡೆಸಲಾಗುವುದು. ಅದೇ ರೀತಿ ನೌಕರರ ಭವಿಷ್ಯ ನಿಧಿ ಕಚೇರಿಯಲ್ಲಿ ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದವರಿಗೆ 6ರಿಂದ 12 ಲಕ್ಷ ಮೊತ್ತದ ಸಾಲಕ್ಕೆ ಶೇಕಡಾ 3ರ ಬಡ್ಡಿದರದಲ್ಲಿ ಸಬ್ಸಿಡಿ, 18 ಲಕ್ಷದವರೆಗಿನ ಸಾಲಕ್ಕೆ ಶೇಕಡಾ 4ರ ಬಡ್ಡಿದರದಲ್ಲಿ ಸಬ್ಸಿಡಿ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.
SCROLL FOR NEXT