ದಾವೂದ್ ಇಬ್ರಾಹಿಂ 
ದೇಶ

ತೀವ್ರ ಹೃದಯಾಘಾತದಿಂದ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಾವು?

ವ್ರ ಹೃದಯಾಘಾತಕ್ಕೆ ಒಳಗಾಗಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿ ಮೃತಪಟ್ಟಿದ್ದಾನೆ ಎಂಬ ಸುದ್ದಿ ಹರಿದಾಡುತ್ತಿದೆ...

ನವದೆಹಲಿ: ತೀವ್ರ ಹೃದಯಾಘಾತಕ್ಕೆ ಒಳಗಾಗಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿ ಮೃತಪಟ್ಟಿದ್ದಾನೆ ಎಂಬ ಸುದ್ದಿ ಹರಿದಾಡುತ್ತಿದೆ.
ತೀವ್ರ ಹೃದಯಾಘಾತಕ್ಕೆ ಒಳಗಾದ ದಾವೂದ್ ಇಬ್ರಾಹಿಂಗೆ ಕರಾಚಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ವರದಿಯಾಗಿದೆ. ಆದರೆ ದಾವೂದ್ ಸಾವಿನ ಬಗ್ಗೆ ಎಲ್ಲಿಯೂ ಅಧಿಕೃತವಾದ ಮಾಹಿತಿ ಪ್ರಕಟವಾಗಿಲ್ಲ. 
ಆದರೆ, ದಾವೂದ್ ಬಾಯ್ ಆರೋಗ್ಯ ಸ್ಥಿರವಾಗಿದ್ದು, ಅವರ ಆರೋಗ್ಯದ ಬಗ್ಗೆ ಎದ್ದಿರುವ ಊಹಾ ಪೋಹಗಳೆಲ್ಲಾ ಸುಳ್ಳು ವದಂತಿ ಎಂದು ದಾವೂದ್ ನ ಆಪ್ತ ಛೋಟಾ ಶಕೀಲ್ ಹೇಳಿದ್ದಾರೆಂದು ಸಿಎನ್ ಎನ್ ನ್ಯೂಸ್ 18 ಸುದ್ದಿ ಸಂಸ್ಥೆ ವರದಿ ಮಾಡಿದೆ.
61 ವರ್ಷದ ದಾವೂದ್ ಇಬ್ರಾಹಿಂ ಏಪ್ರಿಲ್ 19 ರಂದು ಆತನ ಅಳಿಯ ಕರಾಚಿಯ ನಿವಾಸದಲ್ಲಿ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಭಾಗವಹಿಸಿದ್ದ ಎಂದು ಇಂಟಲಿಜೆನ್ಸ್  ಏಜೆನ್ಸಿ ವರದಿ ಮಾಡಿವೆ.
1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ದಾವೂದ್ ಆರೋಪಿಯಾಗಿದ್ದಾನೆ. 1993 ರಲ್ಲಿ ನಡೆದ ಮುಂಬೈ ಸರಣಿ ಸ್ಫೋಟದಲ್ಲಿ 257ಕ್ಕೂ ಅಧಿಕ ಮಂದಿ ಸಾವನ್ನಪ್ಪಿ 717 ಮಂದಿ ಗಾಯಗೊಂಡಿದ್ದರು. ದಾವೂದ್ ಆರೋಗ್ಯದ ಮಾಹಿತಿಯನ್ನು ಬಗ್ಗೆ ಪಾಕಿಸ್ತಾನ ರಹಸ್ಯವಾಗಿಟ್ಟಿದೆ. 1980 ರಲ್ಲಿ ದಾವೂದ್ ಭಾರತ ಬಿಟ್ಟು ಓಡಿ ಹೋಗಿ ತಲೆ ಮರೆಸಿಕೊಂಡಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ'.. 'ನಿಮ್ಮನ್ನು ಈರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ'; Kichcha Sudeepಗೆ ಪತ್ರ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!