ದೇಶ

ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಅಭ್ಯರ್ಥಿ ಬಿಜೆಪಿ ವಿರುದ್ಧ ಪಕ್ಷಗಳು ಒಗ್ಗೂಡಲು ಸಹಕಾರಿ: ಶರದ್ ಯಾದವ್

Srinivas Rao BV
ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ವಿರೋಧಪಕ್ಷಗಳಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಬಿಜೆಪಿ ವಿರುದ್ಧ ಬೇರೆ ಪಕ್ಷಗಳೂ ಒಗ್ಗೂಡುವುದಕ್ಕೆ ಸಹಕಾರಿಯಾಗಲಿದೆ ಎಂದು ಜೆಡಿಯು ನಾಯಕ ಶರದ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ. 
ಎನ್ ಡಿಎ ಅಭ್ಯರ್ಥಿಗೆ ಪ್ರತಿಸ್ಪರ್ಧಿಯಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಜೆಡಿಯು ನಾಯಕ, ಬಿಹಾರ ಸಿಎಂ ನಿತೀಶ್ ಕುಮಾರ್ ಎಐಸಿಸಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಒಂದು ವೇಳೆ ಮಾತುಕತೆ ಯಶಸ್ವಿಯಾಗಿ ಎನ್ ಡಿಎ ಅಭ್ಯರ್ಥಿಗೆ ಪ್ರತಿಸ್ಪರ್ಧಿಯಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಅದು ಬಿಜೆಪಿ ವಿರುದ್ಧ ಬೇರೆಲ್ಲಾ ಪಕ್ಷಗಳು ಒಗ್ಗೂಡುವುದಕ್ಕೆ ಸಹಕಾರಿಯಾಗಲಿದೆ ಎಂದು ಶರದ್ ಯಾದವ್ ಹೇಳಿದ್ದಾರೆ. 
ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯ ವಿರುದ್ಧ ಸ್ಪರ್ಧಿಸುವ ಸಂಭಾವ್ಯರ ಪಟ್ಟಿಯಲ್ಲಿ ಶರದ್ ಯಾದವ್ ಹೆಸರೂ ಸಹ ಕೇಳಿಬರುತ್ತಿದ್ದು,  ಸ್ವತಃ ಶರದ್ ಯಾದವ್ ವಿಪಕ್ಷಗಳು ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂದು ಕರೆ ನೀಡಿರುವುದು ಮಹತ್ವ ಪಡೆದುಕೊಂಡಿದೆ. 
ವಿರೋಧಪಕ್ಷಗಳ ಮತಗಳು ವಿಭಜನೆಯಾಗುತ್ತಿರುವುದು ಇತ್ತೀಚಿನ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವು ಸಿಗುತ್ತಿರುವುದಕ್ಕೆ ಕಾರಣವಾಗಿದೆ. ಆದ್ದರಿಂದ ವಿಪಕ್ಷಗಳು ಬಿಜೆಪಿ ವಿರುದ್ಧ ಒಗ್ಗೂಡುವುದು ಅತ್ಯಗತ್ಯವಾಗಿದೆ ಎಂದು ಶರದ್ ಯಾದವ್ ಕರೆ ನೀಡಿದ್ದಾರೆ. 
SCROLL FOR NEXT