ಉಪಗ್ರಹ ಉಡಾವಣೆ (ಸಂಗ್ರಹ ಚಿತ್ರ) 
ದೇಶ

ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ಪ್ರಧಾನಿ ಮೋದಿಯ 'ಬಾಹ್ಯಾಕಾಶ ರಾಜತಾಂತ್ರಿಕತೆ'

ಮೇ.5 ರಂದು ಶ್ರೀಹರಿಕೋಟಾದಿಂದ ಸಂವಹನ ಉಪಗ್ರಹ (ಜಿಎಸ್ಎಟಿ-9) ಉಡಾವಣೆಯಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸ್ತಾಪಿಸಿದ್ದ ದಕ್ಷಿಣ ಏಷ್ಯಾ ಉಪಗ್ರಹ ಯೋಜನೆ ಭಾರತವನ್ನು ಹೊಸ ಎತ್ತರಕ್ಕೆ...

ನವದೆಹಲಿ: ಮೇ.5 ರಂದು ಶ್ರೀಹರಿಕೋಟಾದಿಂದ ಸಂವಹನ ಉಪಗ್ರಹ (ಜಿಎಸ್ಎಟಿ-9) ಉಡಾವಣೆಯಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸ್ತಾಪಿಸಿದ್ದ ದಕ್ಷಿಣ ಏಷ್ಯಾ ಉಪಗ್ರಹ ಯೋಜನೆ ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದೆ. 
ದಕ್ಷಿಣ ಏಷ್ಯಾ ರಾಷ್ಟ್ರಗಳಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಸಂವಹನ ಉಪಗ್ರಹ ಉಡಾವಣೆಯಾಗಲಿದ್ದು, ನೆರೆ ರಾಷ್ಟ್ರಗಳಿಗೆ ಭಾರತ ಗಿಫ್ಟ್ ನೀಡುವ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹಿಂದೆಂದೂ ಮಾಡಿರದ ಸಾಧನೆಗೆ ಸಜ್ಜುಗೊಂಡಿದೆ. ಈ ಬಗ್ಗೆ ವಿದೇಶಾಂಗ ಇಲಾಖೆಯ ವಕ್ತಾರ ಗೋಪಾಲ್ ಬಗ್ಲೆ ಪ್ರತಿಕ್ರಿಯೆ ನೀಡಿದ್ದು, ನೆರೆಹೊರೆ ಮೊದಲು (ನೈಬರ್ ಹುಡ್ ಫಸ್ಟ್) ಎಂಬ ತತ್ವವನ್ನು ವಾಯುಮಂಡಲವನ್ನೂ ಮೀರಿ ವಿಸ್ತರಿಸಲಾಗಿದೆ. ನೆರೆಯ ರಾಷ್ಟ್ರಗಳಿಗೆ ಉಚಿತವಾಗಿ ಸಂವಹನ ಉಪಗ್ರಹ ಬಳಕೆ ಮಾಡಲು ಅವಕಾಶ ನೀಡಿರುವುದಕ್ಕೆ ಬಾಹ್ಯಾಕಾಶ ಜಗತ್ತಿನಲ್ಲಿ ಪರ್ಯಾಯ ಯಾವುದೂ ಇಲ್ಲ ಎಂದು ಹೇಳಿದ್ದಾರೆ. 
ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ್ದ ದಕ್ಷಿಣ ಏಷ್ಯಾ ಉಪಗ್ರಹ ಯೋಜನೆ ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 2014ರಲ್ಲಿ ಕಠ್ಮಂಡುವಿನಲ್ಲಿ ನಡೆದ ಸಾರ್ಕ್ ರಾಷ್ಟ್ರಗಳ ಸಮ್ಮೇಳನದಲ್ಲಿ ಸಾರ್ಕ್ ರಾಷ್ಟ್ರಗಳಿಗಾಗಿಯೇ ಪ್ರತ್ಯೇಕ ಉಪಗ್ರಹವನ್ನು ಉಡಾವಣೆ ಮಾಡುವುದರ ಬಗ್ಗೆ ಘೋಷಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸಂವಹನ ಉಪಗ್ರಹ ನೆರೆ ರಾಷ್ಟ್ರಗಳಿಗೆ ಭಾರತ ನೀಡುತ್ತಿರುವ ಉಡುಗೊರೆ ಎಂದಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಗುಟ್ಟಾಗಿ ಮದುವೆಯಾಗಿದ್ದಾರಾ ನಟಿ ತ್ರಿಶಾ?: ಲಂಡನ್ ಸೆಲ್ಫಿಯಲ್ಲಿನ ಲಾಕೆಟ್ ನ ಗುಟ್ಟೇನು!

'ಬೆಂಗಳೂರಿನಲ್ಲಿ ಬ್ಲಿಂಕಿಟ್ ರೀತಿ ಕೆಲವೇ ನಿಮಿಷದಲ್ಲಿ ಗುಂಡಿ ಮುಚ್ಚುತ್ತೇವೆ': GBA ಮುಖ್ಯ ಆಯುಕ್ತ ಮಹೇಶ್ವರ ರಾವ್

ಟಿವಿ, ಒಟಿಟಿಗೆ ಬರುತ್ತಾ 'ಪ್ರೇಮದ ಊರಲಿ'? ಚಿತ್ರತಂಡ ಹೇಳಿದ್ದೇನು?

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!