ಮುರಳಿಧರ್ ರಾವ್ 
ದೇಶ

ಮೇ.2 ರೊಳಗೆ ಭಿನ್ನಮತ ಸಮಸ್ಯೆ ಬಗೆಹರಿಸಿ: ಮುರಳಿಧರ್ ರಾವ್ ಗೆ ಬಿಜೆಪಿ ನಾಯಕರ ಮನವಿ

ಬಿಜೆಪಿಯಲ್ಲಿ ಈಶ್ವರಪ್ಪ-ಯಡಿಯೂರಪ್ಪ ಬಣದ ನಡುವಿನ ಭಿನ್ನಮತ ಬಗೆಹರಿಸಲು ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ್ ರಾವ್ ಗೆ ಶೀಘ್ರವೇ ಭಿನ್ನಮತ ಬಗೆಹರಿಸುವ ಒತ್ತಡ ಉಂಟಾಗಿದೆ.

ಬೆಂಗಳೂರು: ಬಿಜೆಪಿಯಲ್ಲಿ ಈಶ್ವರಪ್ಪ-ಯಡಿಯೂರಪ್ಪ ಬಣದ ನಡುವಿನ ಭಿನ್ನಮತ ಬಗೆಹರಿಸಲು ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ್ ರಾವ್ ಗೆ ಶೀಘ್ರವೇ ಭಿನ್ನಮತ ಬಗೆಹರಿಸುವ ಒತ್ತಡ ಉಂಟಾಗಿದೆ. 
ಯಡಿಯೂರಪ್ಪ ಬಣ ಹಾಗೂ ತಟಸ್ಥವಾಗಿರುವ ಬಣದ ಬಿಜೆಪಿ ನಾಯಕರೊಂದಿಗೆ ಏ.30 ರಂದು ಮುರಳಿಧರ್ ರಾವ್ ಚರ್ಚೆ ನಡೆಸಿದ್ದು, ಮೇ.2 ರೊಳಗೆ ಭಿನ್ನಮತದ ಸಮಸ್ಯೆಯನ್ನು ಬಗೆಹರಿಸುವಂತೆ ರಾಜ್ಯ ಬಿಜೆಪಿ ಉಸ್ತುವಾರಿಗೆ ನಾಯಕರು ಒತ್ತಾಯ ಮಾಡಿದ್ದಾರೆ ಎಂದು ತಿಳಿದುಬಂದಿದೆ. 
ಮೇ.6-7 ರಂದು ಮೈಸೂರಿನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಕಾರ್ಯಕಾರಿಣಿ ಸಭೆ ಪ್ರಾರಂಭವಾಗುವುದಕ್ಕೂ ಮುನ್ನ ಮೇ.2 ರ ಒಳಗೆ ಭಿನ್ನಮತದ ಸಮಸ್ಯೆಗೆ ಪರಿಹಾರ ಸೂಚಿಸುವಂತೆ ಮುರಳಿಧರ್ ರಾವ್ ಅವರೊಂದಿಗೆ ನಡೆದ ಸಭೆಯಲ್ಲಿ ಬಿಜೆಪಿ ನಾಯಕರು ಮನವಿ ಮಾಡಿದ್ದಾರೆ. 
ಮೇ.2 ರೊಳಗೆ ಸಮಸ್ಯೆಯನ್ನು ಬಗೆಹರಿಸುವುದಾಗಿ ಮುರಳಿಧರ್ ರಾವ್ ಸಹ ಭರವಸೆ ನೀಡಿದ್ದು, ಎಲ್ಲರ ಅಭಿಪ್ರಾಯವನ್ನು ಹೈಕಮಾಂಡ್ ಮುಂದಿಡುವುದಾಗಿ ತಿಳಿಸಿದ್ದಾರೆ.  
ಮುರಳಿಧರ್ ರಾವ್ ವಿರುದ್ಧ ಈಶ್ವರಪ್ಪ ಬೇಸರ
ಇನ್ನು ಭಿನ್ನಮತ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಮೊದಲ ಭಾಗವಾಗಿ ಯಡಿಯೂರಪ-ಈಶ್ವರಪ್ಪ ಬಣದ ಕೆಲವು ನಾಯಕರನ್ನು ಪಕ್ಷದ ಹುದ್ದೆಯಿಂದ ವಜಾಗೊಳಿಸಲಾಗಿದೆ. ಈಶ್ವರಪ್ಪ ತಮ್ಮ ಬೆಂಬಲಿಗರನ್ನು ಪಕ್ಷದ ಹುದ್ದೆಯಿಂದ ವಜಾಗೊಳಿಸಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದು, ಮುರಳಿಧರ್ ರಾವ್ ಅವರನ್ನು ಭೇಟಿ ಮಾಡದೇ ಶಿವಮೊಗ್ಗಕ್ಕೆ ತೆರಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ