ಬಾಬಾ ರಾಮದೇವ್, 
ದೇಶ

ಮುಂದಿನ 5 ವರ್ಷಗಳಲ್ಲಿ ಭಾರತದ ಮಾರುಕಟ್ಟೆಯಿಂದ ವಿದೇಶಿ ಕಂಪನಿಗಳಿಗೆ ಮೋಕ್ಷ: ಬಾಬಾ ರಾಮ್ ದೇವ್

: ಭಾರತದ ಮಾರುಕಟ್ಟೆಯಿಂದ ಮುಂದಿನ 5 ವರ್ಷಗಳಲ್ಲಿ ಬಹುರಾಷ್ಟ್ರೀಯ ಕಂಪನಿಗಳನ್ನು ದೇಶದಿಂದ ಹೊರ ಓಡಿಸಲಾಗುತ್ತದೆ ಎಂದು ಯೋಗಗುರು ಬಾಬಾ ರಾಮ ..

ಶಹರಾಣಾಪುರ್: ಭಾರತದ ಮಾರುಕಟ್ಟೆಯಿಂದ ಮುಂದಿನ 5 ವರ್ಷಗಳಲ್ಲಿ ಬಹುರಾಷ್ಟ್ರೀಯ ಕಂಪನಿಗಳನ್ನು ದೇಶದಿಂದ ಹೊರ ಓಡಿಸಲಾಗುತ್ತದೆ ಎಂದು ಯೋಗಗುರು ಬಾಬಾ ರಾಮ ದೇವ್ ಹೇಳಿದ್ದಾರೆ.
ಯೋಗಿ ಭರತ ಭೂಷಣ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬಾಬಾ ರಾಮ್ ದೇವ್, ವಿದೇಶಿ ಕಂಪನಿಗಳನ್ನು ಈಸ್ಟ್ ಇಂಡಿಯಾ ಕಂಪನಿಗೆ ಹೋಲಿಸಿದ್ದಾರೆ. ಈ ವಿದೇಶಿ ಕಂಪನಿಗಳು ಭಾರತಕ್ಕೆ ಕಾಲಿಟ್ಟಿರುವುದು ದೇಶವನ್ನು ಲೂಟಿ ಮಾಡಲು ಎಂದು ಆರೋಪಿಸಿದ್ದಾರೆ. ಅಂಥ ಕಂಪನಿಗಳನ್ನು  ಇಲ್ಲಿಂದ ಓಡಿಸಿ ಭಾರತವನ್ನು ಎಂಎನ್ ಸಿ ಕಂಪನಿಗಳಿಂದ ಮುಕ್ತವಾದ ರಾಷ್ಟ್ರವನ್ನಾಗಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. 
ಈ ವಿದೇಶಿ ಕಂಪನಿಗಳು ನಮ್ಮ ದೇಶವನ್ನು ಅಭಿವೃದ್ಧಿಗೊಳಿಸಲು ಬಂದಿಲ್ಲ, ಬದಲಾಗಿ ಲೂಟಿ ಮಾಡುತ್ತಿವೆ ಎಂದು ದೂರಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ, ಹೊಸ ತಂತ್ರಜ್ಞಾನ ಬಳಸಿ  ಹೇಗೆ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದನೆ ಮಾಡಬೇಕು ಎಂಬುದರ ಬಗ್ಗೆ ರೈತರಿಗೆ  ತರಬೇತಿ ನೀಡಲಾಗುವುದು ಎಂದರು.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ