ಜಮ್ಮು ಮತ್ತು ಕಾಶ್ಮೀರ: ಗಡಿಯಲ್ಲಿ ಪಾಕಿಸ್ತಾನ ಸೈನಿಕರ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು ಇದರಲ್ಲಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.
ಅಂತಾರಾಷ್ಟ್ರೀಯ ಗಡಿ ಪೂಂಚ್ ನ ಕೃಷ್ಣ ಗಾಟಿ ಸೆಕ್ಟರ್ ಬಳಿ ಪಾಕ್ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಯೋಧರು ಸಹ ಪ್ರತ್ಯುತ್ತರ ನೀಡುತ್ತಿದ್ದಾರೆ. ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು ಮೂವರು ಯೋಧರು ಗಾಯಗೊಂಡಿದ್ದಾರೆ. ಗಾಯಾಳಾಗಳನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.