ಮಹಾರಾಷ್ಟ್ರದ ಸೋಲಾಪುರದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು, ರೈಲುಗಳ ಮಾರ್ಗ ಬದಲಾವಣೆ!
ಅತ್ತ ಬಿಹಾರದಲ್ಲಿ ಗೂಡ್ಸ್ ರೈಲು ಗುದ್ದಿ 8 ಮಂದಿ ಸಾವನ್ನಪ್ಪಿರುವ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಇತ್ತ ಮಹಾರಾಷ್ಟ್ರದಲ್ಲಿ ಗೂಡ್ಸ್ ರೈಲು ಹಳಿ ತಪ್ಪಿರುವ ವಿಚಾರ ಬೆಳಕಿಗೆ ಬಂದಿದೆ.
ಸೋಲಾಪುರ: ಅತ್ತ ಬಿಹಾರದಲ್ಲಿ ಗೂಡ್ಸ್ ರೈಲು ಗುದ್ದಿ 8 ಮಂದಿ ಸಾವನ್ನಪ್ಪಿರುವ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಇತ್ತ ಮಹಾರಾಷ್ಟ್ರದಲ್ಲಿ ಗೂಡ್ಸ್ ರೈಲು ಹಳಿ ತಪ್ಪಿರುವ ವಿಚಾರ ಬೆಳಕಿಗೆ ಬಂದಿದೆ.
ಮಹಾರಾಷ್ಟ್ರದ ಸೋಲಾಪುರದ ವಾಡಿ ಡಿವಿಷನ್ ನ ದುಧಾನಿ ರೈಲ್ವೇ ನಿಲ್ದಾಣದಲ್ಲಿ ಗೂಡ್ಸ್ ರೈಲು ಹಳಿ ತಪ್ಪಿದ್ದು, ರೈಲಿನ 5 ಬೋಗಿಗಳು ಹಳಿ ತಪ್ಪಿ ನೆಲಕ್ಕುರಳಿವೆ. ಶನಿವಾರ ತಡರಾತ್ರಿ 12.30ರ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಅದೃಷ್ಟಲವಶಾತ್ ಯಾವುದೇ ರೀತಿಯ ಸಾವುನೋವುಗಳು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ರೈಲು ಹಳಿ ತಪ್ಪಿದ ಪರಿಣಾಮ ಅದನ್ನು ತೆರವುಗೊಳಿಸಲು ಈ ಮಾರ್ಗದ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಹೊಟಗಿ-ಗುಂಟ್ಕಲ್, ವಾಡಿ-ಲಾತುರ್ ಸೇರಿದಂತೆ ಒಟ್ಟು 12 ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಸ್ಥಳಕ್ಕೆ ದೌಡಾಯಿಸಿರುವ ಅಧಿಕಾರಿಗಳು ರೈಲು ಬೋಗಿಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.