ಮಿಡ್ನಾಪೋರ್: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಪುಂಸಕ ಎಂದು ಹೇಳುವ ಮೂಲಕ ಬಿಜೆಪಿ ಮುಖಂಡ ಶ್ಯಾಮಪಾದ ಮಾಂಡಲ್ ವಿವಾದ ಸೃಷ್ಟಿಸಿದ್ದಾರೆ.
ಓಲೈಕೆ ರಾಜಕಾರಣ ಮಾಡುತ್ತಿರುವ ಮಮತಾ ಬ್ಯಾನರ್ಜಿ ನಪುಂಸಕ ಎಂದು ಹೇಳಿದ್ದಾರೆ. ಮಮತಾ ಬ್ಯಾನರ್ಜಿ ಹೆಣ್ಣೋ ಅಥವಾ ಗಂಡೋ ಎಂಬುದು ನಿಮಗೆ ತಿಳಿಯುವುದಿಲ್ಲ, ನಾನು ಅವರನ್ನು ನಪುಂಸಕ (ಹಿಜ್ರಾ) ಎಂದು ಕರೆಯುತ್ತೇನೆ ಎಂದು ಹೇಳಿದ್ದಾರೆ.
ಶ್ಯಾಮಪಾದ್ ಹೇಳಿಕೆಗೆ ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕೆಲ ದಿನಗಳ ಹಿಂದೆ ಭಾರತೀಯ ಜನತಾ ಯುವ ಮೋರ್ಚಾ ಲೀಡರ್ ಮಮತಾ ಬ್ಯಾನರ್ಜಿ ತಲೆ ಕತ್ತರಿಸಿದವರಿಗೆ 11 ಲಕ್ಷ ರು ಬಹುಮಾನ ನೀಡುವುದಾಗಿ ಘೋಷಿಸಿ ವಿವಾದ ಸೃಷ್ಟಿಸಿದ್ದರು.