ನವದೆಹಲಿ: 54 ಯುದ್ಧ ಕೈದಿಗಳು ಸೇರಿದಂತೆ ನಾಪತ್ತೆಯಾಗಿರುವ ಭಾರತದ 75 ರಕ್ಷಣಾ ಸಿಬ್ಬಂದಿ ಪಾಕಿಸ್ತಾನದ ವಶದಲ್ಲಿದ್ದಾರೆ ಎಂದು ಕೇಂದ್ರ ಸರ್ಕಾರ ಬುಧವಾರ ಸಂಸತ್ತಿಗೆ ತಿಳಿಸಿದೆ.
ನಾಪತ್ತೆಯಾಗಿರುವ ಭಾರತೀಯರ ಬಗ್ಗೆ ಪಾಕಿಸ್ತಾನ ಇದುವರೆಗೂ ಯಾವುದೇ ಮಾಹಿತಿ ನೀಡಿಲ್ಲ ಎಂದು ವಿದೇಶಾಂಗ ಸಚಿವಾಲಯದ ರಾಜ್ಯ ಸಚಿವ ವಿ.ಕೆ.ಸಿಂಗ್ ಅವರು ಇಂದು ಲೋಕಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.
ಕಳೆದ ಜುಲೈ 27ರವರೆಗೆ ಭಾರತದ ಒಟ್ಟು 417 ಮೀನುಗಾರರು ಪಾಕಿಸ್ತಾನದಲ್ಲಿ ಮತ್ತು 15 ಮೀನುಗಾರರು ಶ್ರೀಲಂಕಾ ವಶದಲ್ಲಿರುವುದಾಗಿ ಸಿಂಗ್ ತಿಳಿಸಿದ್ದಾರೆ.
ಪಾಕಿಸ್ತಾನದ ವಶದಲ್ಲಿರುವ ಭಾರತದ ರಕ್ಷಣಾ ಸಿಬ್ಬಂದಿಗೆ ನಾವು ರಾಜತಾಂತ್ರಿಕ ನೆರವು ನೀಡುವ ನಿರೀಕ್ಷೆಯಲ್ಲಿದ್ದೇವೆ. ಆದರೆ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗುತ್ತಿಲ್ಲ ಎಂದು ಸಿಂಗ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics