ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಅವರನ್ನು ಬೆಂಬಲಿಸುವುದಾಗಿ ಆಮ್ ಆದ್ಮಿ ಪಕ್ಷ ಹೇಳಿದೆ.
ಚುನಾವಣೆ ಬಗ್ಗೆ ಮಾತನಾಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ತಮ್ಮ ಪಕ್ಷ ಗೋಪಾಲಕೃಷ್ಣ ಗಾಂಧಿ ಅವರನ್ನು ಬೆಂಬಲಿಸುವುದನ್ನು ಸ್ಪಷ್ಟಪಡಿಸಿದ್ದಾರೆ. ಇದಕ್ಕೂ ಮುನ್ನ ಯುಪಿಎ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಮಾತುಕತೆಯ ನಂತರ ಪ್ರತಿಕ್ರಿಯೆ ನೀಡಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್, ಆಮ್ ಆದ್ಮಿ ಪಕ್ಷ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಗೋಪಾಲಕೃಷ್ಣ ಗಾಂಧಿ ಅವರನ್ನು ಬೆಂಬಲಿಸಲಿದೆ ಎಂದು ಟ್ವೀಟ್ ಮಾಡಿದ್ದಾರೆ. ಆ.5 ಕ್ಕೆ ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಆಮ್ ಆದ್ಮಿ ಪಕ್ಷ ನಾಲ್ವರು ಸಂಸದರನ್ನು ಹೊಂದಿದ್ದು, ಈ ಪೈಕಿ ಇಬ್ಬರು ಪಕ್ಷದ ವಿರುದ್ಧ ಬಂಡಾಯವೆದ್ದಿದ್ದಾರೆ.