ಹುರಿಯತ್ ನಾಯಕ ಸಯ್ಯದ್ ಅಲಿ ಶಾ ಗಿಲಾನಿ ಹಾಗೂ ಉಗ್ರ ಅಫ್ಜಲ್ ಗುರು (ಸಂಗ್ರಹ ಚಿತ್ರ) 
ದೇಶ

ಜೈಲು ಸ್ಥಳಾಂತರ ಕುರಿತು ಸಹಾಯ ಮಾಡುವಂತೆ ಗಿಲಾನಿ ಮೊರೆ ಹೋಗಿದ್ದ ಉಗ್ರ ಅಫ್ಜಲ್ ಗುರು!

2001 ಸಂಸತ್ ಮೇಲಿನ ದಾಳಿಯ ರೂವಾರಿಯಾಗಿದ್ದ ಉಗ್ರ ಅಫ್ಜಲ್ ಗುರು ದೆಹಲಿಯ ತಿಹಾರ್ ಜೈಲಿನಿಂದ ಶ್ರೀನಗರ ಜೈಲಿಗೆ ಸ್ಥಳಾಂತರಗೊಳ್ಳಲು ಸಹಾಯ ಮಾಡುವಂತೆ ಹುರಿಯತ್ ನಾಯಕ ಸಯ್ಯದ್ ಅಲಿ ಶಾ ಗಿಲಾನಿ ಮೊರೆ...

ಶ್ರೀನಗರ: 2001 ಸಂಸತ್ ಮೇಲಿನ ದಾಳಿಯ ರೂವಾರಿಯಾಗಿದ್ದ ಉಗ್ರ ಅಫ್ಜಲ್ ಗುರು ದೆಹಲಿಯ ತಿಹಾರ್ ಜೈಲಿನಿಂದ ಶ್ರೀನಗರ ಜೈಲಿಗೆ ಸ್ಥಳಾಂತರಗೊಳ್ಳಲು ಸಹಾಯ ಮಾಡುವಂತೆ ಹುರಿಯತ್ ನಾಯಕ ಸಯ್ಯದ್ ಅಲಿ ಶಾ ಗಿಲಾನಿ ಮೊರೆ ಹೋಗಿದ್ದ ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. 
ಕಾಶ್ಮೀರದಲ್ಲಿನ ಹಿಂಸಾಚಾರ ಸೃಷ್ಟಿಸಲು ಪ್ರತ್ಯೇಕತಾವಾದಿಗಳು ಪಾಕಿಸ್ತಾನದಿಂದ ಆರ್ಥಿಕ ನೆರವು ಪಡೆಯುತ್ತಿದ್ದಾರೆಂಬ ಗಂಭೀರ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಪ್ರತ್ಯೇಕತಾವಾದಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಎನ್ಐಎ ದಾಳಿ ನಡೆಸಿತ್ತು. 
ಜೂ.3 2017ರಂದು ಪ್ರತ್ಯೇಕತಾವಾದಿ ಗಿಲಾನಿಯವರ ಅಳಿಯ ಅಲ್ತಾಫ್ ಅಹ್ಮದ್ ಶಾ ಅವರ ಮನೆ ಮೇಲೆಯೂ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಅಫ್ಜಲ್ ಗುರು ಗಿಲಾನಿಯವರಿಗೆ ಬರೆದಿರುವ ಪತ್ರವೊಂದು ದೊರಕಿದೆ. 
ಪತ್ರದಲ್ಲಿ ಅಫ್ಜಲ್ ದೆಹಲಿ ತಿಹಾರ್ ಜೈಲಿನಿಂದ ಶ್ರೀನಗರ ಜೈಲಿಕೆ ಸ್ಥಳಾಂತರಗೊಳ್ಳಲು ಸಹಾಯ ಮಾಡುವಂತೆ ಕೇಳಿರುವುದು ತಿಳಿದುಬಂದಿದೆ. 
ವಿಧಾನಸಭೆಯಲ್ಲಿ ನಿರ್ಣಯ ಮಂಡಿಸುವುದು ನನಗೆ ಬೇಕಿಲ್ಲ. ವಿಧಾನಸಭೆಯಲ್ಲಿ ನಿರ್ಣಯಗಳನ್ನು ಮಂಡಿಸುವ ಬದಲಿಗೆ ಜೈಲು ಸ್ಥಳಾಂತರ ಕುರಿತು ಸುಪ್ರೀಂಕೋರ್ಟ್ ಗೆ ಪ್ರತಿಕ್ರಿಯೆ ನೀಡುವಂತೆ ಒಮರ್ ಅಬ್ದುಲ್ಲಾ (ಆಂದಿನ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ) ಅವರ ಬಳಿ ಮನವಿ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಅಫ್ಜಲ್ ಹೇಳಿದ್ದಾನೆಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?