ಇಂಫಾಲ: ಮಣಿಪುರದ ಟೆಂಗ್ನೌಪಲ್ ಜಿಲ್ಲೆಯಲ್ಲಿರುವ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಜೀವಂತ ಬಾಂಬ್'ವೊಂದು ಪತ್ತೆಯಾಗಿದೆ ಎಂದು ಪೊಲೀಸರು ಬುಧವಾರ ಹೇಳಿದ್ದಾರೆ.
ಗಡಿಯಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಟೆಂಗ್ನೌಪಲ್ ಜಿಲ್ಲೆಯ ಮೊರೆಹ್ ವಾರ್ಡ್ ನಂ.5ರಲ್ಲಿ ಬಾಂಬ್ ಪತ್ತೆಯಾಗಿತ್ತು ಎಂದು ಹೇಳಿದ್ದಾರೆ.
ಜೀವಂತ ಬಾಂಬ್ ದೊರಕುತ್ತಿದ್ದಂತೆಯೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಬಂದು ನಿನ್ನೆ ಸಂಜೆ 4 ಗಂಟೆ ಸುಮಾರಿಗೆ ಬಾಂಬ್ ನ್ನು ನಿಷ್ಕ್ರಿಯಗೊಳಿಸಿದರು ಎಂದು ತಿಳಿಸಿದ್ದಾರೆ.