ಸುಪ್ರೀಂ ಕೋರ್ಟ್ 
ದೇಶ

ಖಾಸಗಿ ಮಾಹಿತಿಗಳನ್ನು ರಕ್ಷಿಸಲು ಸಮಗ್ರ ಮಾರ್ಗದರ್ಶಿ ಸೂತ್ರಗಳು ಅಗತ್ಯ: ಸುಪ್ರೀಂ ಕೋರ್ಟ್

ಜನಸಾಮಾನ್ಯರ ಖಾಸಗಿ ಮಾಹಿತಿಗಳನ್ನು ನಿರ್ದಿಷ್ಟ ಉದ್ದೇಶಗಳಿಗೆ ಬಳಸಿಕೊಳ್ಳುವಾಗ ಅವುಗಳನ್ನು...

ನವದೆಹಲಿ: ಜನಸಾಮಾನ್ಯರ ಖಾಸಗಿ ಮಾಹಿತಿಗಳನ್ನು ನಿರ್ದಿಷ್ಟ ಉದ್ದೇಶಗಳಿಗೆ ಬಳಸಿಕೊಳ್ಳುವಾಗ ಅವುಗಳನ್ನು  ರಕ್ಷಿಸಿಕೊಳ್ಳಲು ಸಮಗ್ರ ಮಾರ್ಗದರ್ಶಿ ಸೂತ್ರಗಳ  ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಜನಸಾಮಾನ್ಯರ ಖಾಸಗಿ ಮಾಹಿತಿಗಳನ್ನು ಗೌಪ್ಯವಾಗಿ ಕಾಪಾಡುವುದು ಮೂಲಭೂತ ಹಕ್ಕೇ ಎಂಬಂತಹ ವಿವಾದಾಸ್ಪದ ವಿಷಯಗಳ ಕುರಿತು ವಿಚಾರಣೆ ನಡೆಸಿದ  ಒಂಭತ್ತು ಮಂದಿ ನ್ಯಾಯಾಧೀಶರನ್ನೊಳಗೊಂಡ ಸಂವಿಧಾನ ಪೀಠ, ಗುಜರಾತ್ ಸರ್ಕಾರದ ವಕೀಲರ ಮನವಿಯನ್ನು ತಿರಸ್ಕರಿಸಿತು. ಜನರ ಖಾಸಗಿ ಮಾಹಿತಿಗಳನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿರುವುದರಿಂದ ಅವುಗಳ ರಕ್ಷಣೆಗೆ ಸಮಗ್ರ ಮಾರ್ಗದರ್ಶಿ ಸೂತ್ರಗಳ ಅವಶ್ಯಕತೆಯಿದೆ ಎಂದು ಹೇಳಿದೆ.
 ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೆಹರ್ ಅವರನ್ನೊಳಗೊಂಡ ನ್ಯಾಯಪೀಠ, ಭಾರತ 1948ರ ಅಂತರರಾಷ್ಟ್ರೀಯ ಅಧಿವೇಶನಕ್ಕೆ ಸಹಿ ಹಾಕಿದ್ದು, ಅದರಲ್ಲಿ ಗೌಪ್ಯತೆಯನ್ನು ಕಾಪಾಡುವುದು ಮಾನವ ಹಕ್ಕು ಎಂದು ಹೇಳಲಾಗಿದೆ ಎಂದು ಉಲ್ಲೇಖಿಸಿದೆ.
1948ರಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮಾಡಿಕೊಂಡ ಜನಸಾಮಾನ್ಯರ ಖಾಸಗಿ ಮಾಹಿತಿಗಳನ್ನು ರಕ್ಷಿಸಿಕೊಳ್ಳುವುದು ಮೂಲಭೂತ ಹಕ್ಕು ಎಂದು ಸಹಿ ಮಾಡಿಕೊಂಡಿರುವಾಗ ಮತ್ತು ಇದೀಗ ನಿರ್ದಿಷ್ಟ ಉದ್ದೇಶಗಳಿಗೆ ಮಾಹಿತಿಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸುವಾಗ ಅದನ್ನು ಹೇಗೆ ನಿಭಾಯಿಸುತ್ತೀರಿ ಎಂದು ಮಹಾರಾಷ್ಟ್ರ ಸರ್ಕಾರ ಮುಂದಿಟ್ಟ ಪ್ರಶ್ನೆಯನ್ನು ಕೋರ್ಟ್ ಉಲ್ಲೇಖಿಸಿತು.

ಇಂತಹ ಸಂದರ್ಭದಲ್ಲಿ ವ್ಯಕ್ತಿಗಳ ಖಾಸಗಿ ಮಾಹಿತಿಗಳನ್ನು ನಿರ್ದಿಷ್ಟ ಉದ್ದೇಶಗಳಿಗೆ ಮಾತ್ರ ಬಳಸಿಕೊಳ್ಳಬಹುದಾಗಿದ್ದು ಅದಕ್ಕೆ ಸಮಗ್ರ ಮಾರ್ಗದರ್ಶಿ ಸೂತ್ರದ ಅಗತ್ಯವಿದೆ ಎಂದು ನ್ಯಾಯಾಲಯ ಒತ್ತಿ ಹೇಳಿತು.

ಒಬ್ಬ ವ್ಯಕ್ತಿಯ ಹೆಸರು, ಪೋಷಕರ ಹೆಸರು, ದೂರವಾಣಿ ಸಂಖ್ಯೆ ಸಾರ್ವಜನಿಕವಾಗಿ ಸಿಗುತ್ತದೆಯೆಂದರೆ ಅದನ್ನು ನಿರ್ದಿಷ್ಟ ಉದ್ದೇಶಗಳಿಗೆ ಮಾತ್ರ ಬಳಸಿಕೊಳ್ಳುತ್ತಾರೆಯೇ ಇಲ್ಲವೇ ಎಂದು ಪರೀಕ್ಷಿಸುವುದು ಕಷ್ಟವಾಗುತ್ತದೆ. ಅಂತಹ ಸಂದರ್ಭದಲ್ಲಿ ಅವುಗಳನ್ನು ನಿಭಾಯಿಸಲು ಸಮಗ್ರ ಮಾರ್ಗದರ್ಶಿ ಸೂತ್ರಗಳ ಅಗತ್ಯವಿದೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel