ಸಾಂದರ್ಭಿಕ ಚಿತ್ರ 
ದೇಶ

ಅತ್ಯಾಚಾರಕ್ಕೆ ಯತ್ನ: ಕಾಮುಕನ ನಾಲಿಗೆ ಕತ್ತರಿಸಿದ ಮಹಿಳೆ

ತನ್ನ ಮೇಲೆ ಅತ್ಯಾಚಾರಕ್ಕೆ ಮುಂದಾದ ಕಾಮುಕನೊಬ್ಬನ ನಾಲಿಗೆಯನ್ನೇ ಮಹಿಳೆಯೊಬ್ಬರು ಕಚ್ಚಿ ಕತ್ತರಿಸಿರುವ ಘಟನೆಯೊಂದು ತಿರುವನಂತಪುರದಲ್ಲಿ ನಡೆದಿದೆ...

ಕೊಚ್ಚಿ: ತನ್ನ ಮೇಲೆ ಅತ್ಯಾಚಾರಕ್ಕೆ ಮುಂದಾದ ಕಾಮುಕನೊಬ್ಬನ ನಾಲಿಗೆಯನ್ನೇ ಮಹಿಳೆಯೊಬ್ಬರು ಕಚ್ಚಿ ಕತ್ತರಿಸಿರುವ ಘಟನೆಯೊಂದು ತಿರುವನಂತಪುರದಲ್ಲಿ ನಡೆದಿದೆ. 
ನಾರಕ್ಕಲ್ ನ ನಿವಾಸಿಯಾಗಿರುವ ರಾಜೇಶ್ (30) ಅತ್ಯಾಚಾರಕ್ಕೆ ಯತ್ನಿಸಿದ ಯುವಕನಾಗಿದ್ದಾನೆ. ಜು.26ರ ಮಧ್ಯರಾತ್ರಿ ಮಹಿಳೆಯ ಮನೆಗೆ ನುಗ್ಗಿರುವ ಕಾಮುಕ ರಾಜೇಶ್ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಸ್ವರಕ್ಷಣೆ ಮಾಡಿಕೊಳ್ಳಲು ಯತ್ನಿಸಿ ಯುವಕನ ನಾಲಿಗೆಯನ್ನು ಹಲ್ಲಿನಿಂದ ಕಚ್ಚಿ ಕತ್ತರಿಸಿದ್ದಾಳೆಂದು ಪೊಲೀಸರು ಹೇಳಿದ್ದಾರೆ. 
ಘಟನೆ ನಡೆದ ಮರುದಿನ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸುವ ವೇಳೆ ಯುವಕನ ನಾಲಿಗೆಯನ್ನು ಪೊಲೀಸರಿಗೆ ಒಪ್ಪಿಸಿದ್ದಾಳೆ. ಮಹಿಳೆ 2 ಸೆ.ಮೀ ನಷ್ಟು ನಾಲಿಗೆಯನ್ನು ನೀಡಿದ್ದರು. ಅತ್ಯಾಚಾರಕ್ಕೆ ಯತ್ನಿಸಿದ ಯುವಕ ನೆರೆಮನೆಯಾತನೇ ಆಗಿದ್ದು, ಘಟನೆ ಬಳಿಕ ತಲೆಮರೆಸಿಕೊಂಡಿದ್ದ. ತೀವ್ರ ಹುಡುಕಾಟದ ಬಳಿಕ ಯುವಕನನ್ನು ಕೊಚ್ಚಿ ಆಸ್ಪತ್ರೆಯಲ್ಲಿ ಬಂಧನಕ್ಕೊಳಪಡಿಸಲಾಯಿತು.
ಆಸ್ಪತ್ರೆಗೆ ದಾಖಲಾಗಿದ್ದ ಆರೋಪಿ ಅಪಘಾತದಲ್ಲಿ ನಾಲಿಗೆಗೆ ಗಾಯವಾಗಿದೆ ಎಂದು ಹೇಳಿಕೊಂಡಿದ್ದಾನೆ. ಚಿಕಿತ್ಸೆ ಬಳಿಕ ಆಸ್ಪತ್ರೆ ಆರೋಪಿಯನ್ನು ಬಿಡುಗಡೆ ಮಾಡಿತ್ತು. ನಂತರ ಆರೋಪಿಯನ್ನು ಬಂಧನಕ್ಕೊಳಪಡಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT