ದೇಶ

ಚೀನಾ ಗಡಿ ಸಮಸ್ಯೆಗೆ ಯುದ್ಧ ಪರಿಹಾರ ಅಲ್ಲ; ಪರಸ್ಪರ ಮಾತುಕತೆಯೇ ಮದ್ದು: ಸುಷ್ಮಾ ಸ್ವರಾಜ್

Vishwanath S
ನವದೆಹಲಿ: ಚೀನಾ ಗಡಿ ಸಮಸ್ಯೆಗೆ ಯುದ್ಧ ಪರಿಹಾರವಲ್ಲ. ರಾಜತಾಂತ್ರಿಕ ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬೇಕಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. 
ಡೋಕ್ಲಾಂ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಮಾತನಾಡಿದ ಸುಷ್ಮಾ ಸ್ವರಾಜ್ ಅವರು, ಯಾವುದೇ ಸಮಸ್ಯೆಗಳನ್ನು ನಿವಾರಿಸಲು ತಾಳ್ಮೆ ಮುಖ್ಯವಾಗಿದ್ದು, ಒಂದು ವೇಳೆ ತಾಳ್ಮೆ ಕಳೆದುಕೊಂಡರೆ ಇನ್ನೊಂದು ಕಡೆಯಿಂದ ಪ್ರಚೋದನಾತ್ಮಕ ನಡೆ ಉಂಟಾಗಬಹುದು. ಹೀಗಾಗಿ ತಾಳ್ಮೆ ಮೂಲಕ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುತ್ತಿದೆ ಎಂದರು. 
ಡೋಕ್ಲಾಂ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ನಡೆದ ಚರ್ಚೆ ವೇಳೆ ಸದಸ್ಯರೊಬ್ಬರು ಭಾರತದ ವಿದೇಶಿ ನೀತಿ ಮತ್ತು ಕಾರ್ಯತಂತ್ರದ ಕುರಿತು ಧ್ವನಿ ಎತ್ತಿದ್ದು ಇದಕ್ಕೆ ಉತ್ತರಿಸಿದ ಸುಷ್ಮಾ ಸ್ವರಾಜ್ ಅವರು ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ನಾವು ಚೀನಾದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುತ್ತಿದೆ ಎಂದರು. 
ಚೀನಾ ಗಡಿಯಲ್ಲಿ ಯುದ್ಧದ ಕಾರ್ಮೋಡ ಇರುವುದರಿಂದ ಮಿಲಿಟರಿ ಸಿದ್ಧತೆಗಳು ನಡೆಯುತ್ತಿದೆ. ಆದರೆ ಯುದ್ಧದಿಂದಾಗಿ ಸಮಸ್ಯೆ ಪರಿಹರಿಸಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ರಾಜತಾಂತ್ರಿಕ ಮಾತುಕತೆ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುತ್ತಿದೆ. ಸಮಸ್ಯೆ ಪರಿಹಾರವಾಗಬಹುದೆಂಬ ವಿಶ್ವಾಸವನ್ನು ಎಂದು ಸುಷ್ಮಾ ಸ್ವರಾಜ್ ವ್ಯಕ್ತಪಡಿಸಿದರು.
SCROLL FOR NEXT