ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಇದೆ ಮೊದಲ ಬಾರಿ ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ನೋಟಾ (None Of The Above) ಬಳಸುವ ಅವಕಾಶವನ್ನು ನೀಡಿರುವುದಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಸುಪ್ರೀಂ ಕೋರ್ಟ್ ನ ಆದೇಶದಿಂದ ಗುಜರಾತ್ ಕಾಂಗ್ರೆಸ್ ಗೆ ತೀವ್ರ ಹಿನ್ನಡೆಯುಂಟಾಗಿದೆ.
ನೋಟಾ ಆಯ್ಕೆ ಸಾಂವಿಧಾನಿಕ ವಿಷಯವಾಗಿದ್ದು ಈ ಬಗ್ಗೆ ಚರ್ಚೆ ನಡೆಸಬೇಕಾಗುತ್ತದೆ. ಕಾಂಗ್ರೆಸ್ ಪಕ್ಷದ ಆಕ್ಷೇಪಣೆಗೆ 2 ವಾರಗಳಲ್ಲಿ ಉತ್ತರಿಸುವಂತೆ ಇದೇ ವೇಳೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದ್ದು, ಈ ಬಗ್ಗೆ ಸೆ.18 ರಂದು ವಿಸ್ತೃತ ವಿಚಾರಣೆ ನಡೆಸುವುದಾಗಿ ಹೇಳಿದೆ.
2014 ರ ರಾಜ್ಯಸಭಾ ಚುನಾವಣೆಯಲ್ಲಿಯೇ ನೋಟಾ ಬಳಕೆಗೆ ಅಧಿಸೂಚನೆ ಹ್ಪೊರಡಿಸಲಾಗಿತ್ತು, ಆದರೆ ಆಗ ವಿರೋಧ ವ್ಯಕ್ತಪಡಿಸದ ಕಾಂಗ್ರೆಸ್ ಇಷ್ಟು ವಿಳಂಬವಾಗಿ ಏಕೆ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ರಾಜ್ಯಸಭೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ನೋಟಾ (None Of The Above) ಆಯ್ಕೆಯನ್ನು ಬಳಸಲು ಅವಕಾಶ ನೀಡಿರುವ ಕೇಂದ್ರ ಚುನಾವಣಾ ಆಯೋಗದ ಕ್ರಮವನ್ನು ಗುಜರಾತ್ ಕಾಂಗ್ರೆಸ್ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿತ್ತು, ಈ ಸಂಬಂಧ ವಿಚಾರಣೆ ನಡೆಸಲು ಕೋರ್ಟ್ ಒಪ್ಪಿಗೆ ಸೂಚಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics