ದೆಹಲಿ ವಿಮಾನ ನಿಲ್ದಾಣ (ಸಂಗ್ರಹ ಚಿತ್ರ) 
ದೇಶ

ದೆಹಲಿ ವಿಮಾನ ನಿಲ್ದಾಣದಲ್ಲಿ ಸಜೀವ ಬುಲೆಟ್'ಗಳನ್ನು ಹೊತ್ತೊಯ್ಯುತ್ತಿದ್ದ ವ್ಯಕ್ತಿ ಬಂಧನ

ಸಜೀವ ಬುಲೆಟ್ ಗಳನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕನೊಬ್ಬನನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಪಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ...

ನವದೆಹಲಿ: ಸಜೀವ ಬುಲೆಟ್ ಗಳನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕನೊಬ್ಬನನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಪಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
ಕೋಲ್ಕತಾ ಮೂಲದ ಸುಧೀರ್ ಅಗರ್ವಾಲ್ ಬಂಧಿತ ವ್ಯಕ್ತಿಯೆಂದು ಹೇಳಲಾಗುತ್ತಿದೆ. ದೆಹಲಿ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ತಪಾಸಣೆ ನಡೆಸುತ್ತಿದ್ದ ವೇಳೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿಗಳ ಕೈಗೆ ಬ್ಯಾಗ್ ವೊಂದು ದೊರಕಿದೆ. ಈ ವೇಳೆ ತಪಾಸಣೆ ನಡೆಸಿದಾದ ಬ್ಯಾಗ್ ನಲ್ಲಿ ಸಜೀವ ಬುಲೆಟ್ ಗಳು ದೊರಕಿದೆ ಎಂದು ತಿಳಿದುಬಂದಿದೆ. 
ಬಂಧಿತ ಅಗರ್ವಾಲ್ ಅವರ ಬ್ಯಾಗ್ ನಿಂದ ಸಜೀವ ಬುಲೆಟ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇದೀಗ ವ್ಯಕ್ತಿಯನ್ನು ಪೊಲೀಸ ವಶಕ್ಕೆ ನೀಡಲಾಗಿದೆ. ತಪಾಸಣೆ ವೇಳೆ ಬುಲೆಟ್ ಗಳನ್ನು ಕೊಂಡೊಯ್ಯಿತ್ತಿರುವ ಕುರಿತು ಅಗರ್ವಾಲ್ ಸರಿಯಾದ ದಾಖಲೆಗಳನ್ನು ನೀಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಿಮಾನಗಳಲ್ಲಿ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi: ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; ಕನಿಷ್ಠ 9 ಸಾವು, 20 ಜನರಿಗೆ ಗಾಯ; ದೆಹಲಿಯಲ್ಲಿ ಹೈ ಅಲರ್ಟ್; Video

Delhi ಸ್ಫೋಟ: ತನಿಖೆಗೆ ಕೈಜೋಡಿಸುವಂತೆ NIA, NSGಗೆ ಅಮಿತ್ ಶಾ ಆದೇಶ; ಕಾರು ಮಾಲೀಕ ವಶಕ್ಕೆ

Delhi ಕೆಂಪುಕೋಟೆ ಬಳಿ ಕಾರು ಸ್ಫೋಟ; ಬೆಂಗಳೂರಿನಲ್ಲೂ ತೀವ್ರ ಕಟ್ಟೆಚ್ಚರ; ಗಸ್ತು, ತಪಾಸಣೆ ಹೆಚ್ಚಿಸಲು ಸೂಚನೆ

Delhi Blast: ಬೆಳಗ್ಗೆ ಸ್ಫೋಟಕ ವಶ, ಸಂಜೆ ಭಾರೀ ಸ್ಫೋಟ; 'ದೊಡ್ಡ ಪಿತೂರಿ' ಬಗ್ಗೆ ಉತ್ತರಿಸುವಂತೆ ಕೇಂದ್ರಕ್ಕೆ ಕೇಜ್ರಿವಾಲ್ ಆಗ್ರಹ

Delhi ಕಾರು ಸ್ಫೋಟದ ಬಗ್ಗೆ ಅಮಿತ್ ಶಾ ಜೊತೆ ಪ್ರಧಾನಿ ಮೋದಿ ಚರ್ಚೆ

SCROLL FOR NEXT