ರಾಹುಲ್ ಗಾಂಧಿ 
ದೇಶ

ದಾಳಿ ಪ್ರಕರಣ: ಓರ್ವ ಬಿಜೆಪಿ ನಾಯಕನ ಬಂಧನ; ಪ್ರತಿಭಟನೆ ಬಿಟ್ಟು ಸಂತ್ರಸ್ತರಿಗೆ ನೆರವಾಗಲು ರಾಹುಲ್ ಕರೆ

ಆ.02 ರಂದು ತಮ್ಮ ಮೇಲೆ ನಡೆದ ದಾಳಿಯನ್ನು ಪ್ರತಿಭಟಿಸುವ ಬದಲು ಗುಜರಾತ್ ನಲ್ಲಿ ಪ್ರವಾಹಕ್ಕೆ ಸಿಲುಕಿದವರಿಗೆ ಸಹಾಯ ಮಾಡಿ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಕಾರ್ಯಕರ್ತರಿಗೆ...

ನವದೆಹಲಿ: ಆ.02 ರಂದು ತಮ್ಮ ಮೇಲೆ ನಡೆದ ದಾಳಿಯನ್ನು ಪ್ರತಿಭಟಿಸುವ ಬದಲು ಗುಜರಾತ್ ನಲ್ಲಿ ಪ್ರವಾಹಕ್ಕೆ ಸಿಲುಕಿದವರಿಗೆ ಸಹಾಯ ಮಾಡಿ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. 
ಗುಜರಾತ್ ನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ರಾಹುಲ್ ಗಾಂಧಿ ಮೇಲೆ ನಡೆದಿರುವ ದಾಳಿಯನ್ನು ಖಂಡಿಸಿ ಪ್ರತಿಭಟನೆ ನಡೆಸುವುದರಲ್ಲಿ ನಿರತರಾಗಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕಾರ್ಯಕರ್ತರಿಗೆ ಕರೆ ನೀಡಿದ್ದು, ಪ್ರವಾಹಕ್ಕೆ ಸಿಲುಕಿದವರಿಗೆ ಸಹಾಯ ಮಾಡಿ ಎಂದು ಹೇಳಿದ್ದಾರೆ. 
ಇದೇ ವೇಳೆ ರಾಹುಲ್ ಗಾಂಧಿ ಮೇಲಿನ ದಾಳಿ ಪ್ರಕರಣದಲ್ಲಿ ಬಿಜೆಪಿ ಯುವ ಮೋರ್ಚಾದ ನಾಯಕನನ್ನು ಬಂಧಿಸಲಾಗಿದೆ. ನಿನ್ನೆ ಪ್ರವಾಹ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಲು ಗುಜರಾತ್'ಗೆ ತೆರಳಿದ್ದ ವೇಳೆ ರಾಹುಲ್ ಗಾಂಧಿಯವರ ಕಾರಿನ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ್ದರು. ಅಲ್ಲದೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪರ ಘೋಷಣೆಗಳನ್ನು ಕೂಗಿದ್ದರು. ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್'ಎಸ್ಎಸ್) ದವರು ನನ್ನ ಕಾರಿನ ಮೇಲೆ ದಾಳಿ ನಡೆಸಿದ್ದರು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಆರೋಪಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!