ಆಡಳಿತಾರೂಢ ಎನ್'ಡಿಎ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು 
ದೇಶ

ಉಪ ರಾಷ್ಟ್ರಪತಿ ಚುನಾವಣೆ 2017: ನಾನು ಯಾರ ವಿರುದ್ಧವೂ ಸ್ಪರ್ಧಿಸುತ್ತಿಲ್ಲ- ವೆಂಕಯ್ಯ ನಾಯ್ಡು

ನಾನು ಯಾವುದೇ ಪಕ್ಷದ ವಿರುದ್ಧವಾಗಲೀ ಅಥವಾ ವ್ಯಕ್ತಿಯ ವಿರುದ್ಧವಾಗಲೀ ಸ್ಪರ್ಧಿಸುತ್ತಿಲ್ಲ ಎಂದು ಆಡಳಿತಾರೂಢ ಎನ್'ಡಿಎ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಅವರು ಶನಿವಾರ ಹೇಳಿದ್ದಾರೆ...

ನವದೆಹಲಿ: ನಾನು ಯಾವುದೇ ಪಕ್ಷದ ವಿರುದ್ಧವಾಗಲೀ ಅಥವಾ ವ್ಯಕ್ತಿಯ ವಿರುದ್ಧವಾಗಲೀ ಸ್ಪರ್ಧಿಸುತ್ತಿಲ್ಲ ಎಂದು ಆಡಳಿತಾರೂಢ ಎನ್'ಡಿಎ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಅವರು ಶನಿವಾರ ಹೇಳಿದ್ದಾರೆ. 

ಮತದಾನಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಾಕಷ್ಟು ರಾಜಕೀಯ ಪಕ್ಷಗಳು ನನಗೆ ಬೆಂಬಲ ವ್ಯಕ್ತಪಡಿಸುತ್ತಿವೆ. ಗೆಲವು ಸಾಧಿಸುವ ವಿಶ್ವಾಸವಿದೆ. ನಾನು ಯಾವುದೇ ಪಕ್ಷದ ವಿರುದ್ಧವಾಗಲೀ ಅಥವಾ ಯಾವುದೇ ವ್ಯಕ್ತಿಯ ವಿರುದ್ಧವಾಗಲೀ ಸ್ಪರ್ಧಿಸುತ್ತಿಲ್ಲ ಎಂದು ಹೇಳಿದ್ದಾರೆ. 

ಸಂಸತ್ತಿನ ಎರಡೂ ಸದನಗಳಲ್ಲಿರುವ ಸದಸ್ಯರಿಗೆ ನಾನು ಗೊತ್ತಿರುವ ವ್ಯಕ್ತಿಯಾಗಿದ್ದೇನೆ. ಹೀಗಾಗಿ ನಾನು ಯಾವುದೇ ಪ್ರಚಾರಗಳನ್ನು ನಡೆಸಲಿಲ್ಲ. ಪ್ರತೀಯೊಬ್ಬರಿಗೂ ನಾನು ಪತ್ರ ಬರೆದಿದ್ದೆ, ಎಲ್ಲರೂ ಉತ್ತಮವಾಗಿಯೇ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ, ಉಪರಾಷ್ಟ್ರಪತಿ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಸ್ಥಾನಕ್ಕೆ ಸ್ಥಾನವೊದಗಿಸುವ ಕೆಲವನ್ನು ನಾನು ಮಾಡುತ್ತೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ