ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಎನ್ ಡಿಎ ಅಭ್ಯರ್ಥಿ ವೆಂಕಯ್ಯ ನಾಯ್ಡು 15 ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.
ಯುಪಿಎ ಅಭ್ಯರ್ಥಿ ಗೋಪಾಲ್ ಕೃಷ್ಣ ಗಾಂಧಿ ವಿರುದ್ಧ ಸ್ಪರ್ಧಿಸಿದ್ದ ವೆಂಕಯ್ಯ ನಾಯ್ಡು ಅವರಿಗೆ 516 ಮತಗಳು ದೊರೆತಿದ್ದರೆ, ಪರಾಜಿತ ಅಭ್ಯರ್ಥಿ ಗೋಪಾಲ ಕೃಷ್ಣ ಗಾಂಧಿ ಅವರು 244 ಮತಗಳನ್ನು ಪಡೆದಿದ್ದಾರೆ.
ಉಪರಾಷ್ಟ್ರಪತಿ ಚುನಾವಣೆಗೆ ಆ.05 ರಂದು ನಡೆದ ಮತದಾನದಲ್ಲಿ ಶೇ.98.21 ರಷ್ಟು ಮತ ಚಲಾವಣೆಯಾಗಿದ್ದು, ಒಟ್ಟು 785 ಮತಗಳಲ್ಲಿ 771 ಮತಗಳು ಚಲಾವಣೆಯಾಗಿದ್ದವು. ಈ ಪೈಕಿ ವೆಂಕಯ್ಯ ನಾಯ್ಡು 516 ಮತಗಳನ್ನು ಪಡೆದಿದ್ದಾರೆ.