ನವದೆಹಲಿ: ಕಾಂಗ್ರೆಸ್ನ ಸಾಮಾಜಿಕ ಮಾಧ್ಯಮದ ಉಸ್ತುವಾರಿ ವಹಿಸಿಕೊಂಡಿರುವ ನಟಿ, ಮಾಜಿ ಸಂಸದೆ ರಮ್ಯಾ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಹೊಗಳಿ, ಪ್ರಧಾನಿ ನರೇಂದ್ರ ಮೋದಿಯನ್ನು ತೆಗಳಿ ಟ್ವೀಟ್ ಮಾಡಿದ್ದು ಇದಕ್ಕೆ ಟ್ವೀಟರಿಗರು ಆಕ್ರೋಶ ಹೊರಹಾಕಿದ್ದಾರೆ.
ಗುಜರಾತ್ ನಲ್ಲಿ ರಾಹುಲ್ ಗಾಂಧಿ ಕಾರಿನ ಮೇಲೆ ನಡೆದ ಕಲ್ಲು ತೂರಾಟದ ಬಗ್ಗೆ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಕಾಂಗ್ರೆಸ್ ನ ಇಂತಹ ನಾಟಕಗಳ ಬಗ್ಗೆ ಜನರಿಗೆ ಗೊತ್ತಿದೆ ಎಂದು ಟ್ವೀಟಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರಮ್ಯಾ ಕಾನೂನು ವ್ಯವಸ್ಥೆಯನ್ನು ನೀವು ಒಬ್ಬ ಕೊಲೆಗಡುಕನಿಂದ ಕಲಿತರಲ್ಲವೆ ಎಂದು ಟ್ವೀಟಿಸಿರುವುದು ವಿವಾದಕ್ಕೆ ಕಾರಣವಾಗಿದೆ.