ದಿಲೀಪ್ ಕುಮಾರ್ ಆರೋಗ್ಯ ಸುಧಾರಿಸುತ್ತಿದ್ದು, ಸ್ಥಿರವಾಗಿದೆ:ಲೀಲಾವತಿ ಆಸ್ಪತ್ರೆ
ಮೂತ್ರಪಿಂಡದ ಸಮಸ್ಯೆಯಿಂದ ಮುಂಬೈಯ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ...
ಮುಂಬೈ: ಮೂತ್ರಪಿಂಡದ ಸಮಸ್ಯೆಯಿಂದ ಮುಂಬೈಯ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಅವರ ಆರೋಗ್ಯ ಇಂದು ಸುಧಾರಿಸಿದ್ದು, ಸ್ಥಿರವಾಗಿದ್ದಾರೆ ಎಂದು ತಿಳಿದುಬಂದಿದೆ.
''ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರಿಗೆ ಈಗ ಜ್ವರವಿಲ್ಲ, ಉಸಿರಾಟದ ತೊಂದರೆಯಿಲ್ಲ,ಅವರಿಗೆ ಪ್ರಜ್ಞೆಯಿದೆ, ಅವರು ವೈದ್ಯರು ಶಿಫಾರಸು ಮಾಡಿದ ಕೆಲವು ಆಹಾರವನ್ನು ತಿನ್ನುತ್ತಾರೆ, ಮೂತ್ರಪಿಂಡದ ಸಮಸ್ಯೆ ಕೂಡ ಸುಧಾರಿಸುತ್ತಿದೆ ಎಂದು ಲೀಲಾವತಿ ಆಸ್ಪತ್ರೆಯ ಉಪಾಧ್ಯಕ್ಷ ಅಜಯ್ ಕುಮಾರ್ ಪಾಂಡೆ ತಿಳಿಸಿದ್ದಾರೆ.
94 ವರ್ಷದ ನಟ ದಿಲೀಪ್ ಅವರಿಗೆ ಹೃದ್ರೋಗ ತಜ್ಞ ನಿತಿನ್ ಗೋಖಲೆ ಮತ್ತು ಮೂತ್ರಪಿಂಡ ಶಾಸ್ತ್ರಜ್ಞ ಅರುಣ್ ಷಾ ಪಶ್ಚಿಮ ಮುಂಬೈಯ ಬಾಂದ್ರಾದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.