ಬಂಧಿತ ವಿನೀಶ್ ಶೆಟ್ಟಿ (ಸಂಗ್ರಹ ಚಿತ್ರ) 
ದೇಶ

ಭೂಗತ ಪಾತಕಿ ಚೋಟಾ ರಾಜನ್ ಸಹಚರ ವಿನೀಶ್ ಶೆಟ್ಟಿ ಬಂಧನ!

ಜೋಡಿ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಿದ್ದ ಭೂಗತ ಪಾತಕಿ ಚೋಟಾ ರಾಜನ್ ಸಹಚರ ವಿನೀಶ್ ಶೆಟ್ಟಿಯನ್ನು ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮುಂಬೈ: ಜೋಡಿ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಿದ್ದ ಭೂಗತ ಪಾತಕಿ ಚೋಟಾ ರಾಜನ್ ಸಹಚರ ವಿನೀಶ್ ಶೆಟ್ಟಿಯನ್ನು ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಈ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜಾಮೀನಿನ ಮೇಲೆ ಬಿಡುಗಡೆಗೊಂಡು ವಿಚಾರಣೆಗೆ ಹಾಜರಾಗದೆ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ  ಕುಖ್ಯಾತ ಆರೋಪಿ, ಚೋಟಾ  ರಾಜನ್ ಸಹಚರ ವಿನೀಶ್ ಶೆಟ್ಟಿಯನ್ನು ಕೊಣಾಜೆ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಪ್ರಸ್ತುತ ವಿನೀಶ್ ಶೆಟ್ಟಿಯನ್ನು ಮುಂಬೈ ಪೊಲೀಸರಿಂದ ಕೋಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೂಲತಃ ಉಡುಪಿಯ ಶಿರ್ವ ನಿವಾಸಿಯಾಗಿರುವ ವಿನೇಶ್ ಶೆಟ್ಟಿ (44 ವರ್ಷ) ವಿರುದ್ಧ ಜೋಡಿ ಕೊಲೆ ಮಾಡಿದ ಆರೋಪವಿತ್ತು. 2003 ರಲ್ಲಿ ಕಪ್ಪು ಕಲ್ಲು ಕೋರೆ ಮಾಲೀಕ ವೇಣು ಗೋಪಾಲ ನಾಯಕ್ ಮತ್ತು ಅವರ ಚಾಲಕ  ಸಂತೋಷ್ ಎಂಬವರನ್ನು ಮುಡಿಪು ಇರಾ ಕ್ರಾಸ್ ಸಮೀಪ ಕೊಲೆಗೈಯ್ಯಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಇದರಲ್ಲಿ ಜಾಮೀನು  ಪಡೆದಿದ್ದ ಆರೋಪಿ ವಿನೀಶ್  ಶೆಟ್ಟಿ 2015 ರವರೆಗೂ ವಿಚಾರಣೆಗೆ ಹಾಜರಾಗಿದ್ದು, ಬಳಿಕ ವಿನೇಶ್ ತಲೆಮರೆಸಿಕೊಂಡಿದ್ದ. ಹೀಗಾಗಿ ವಿನೀಶ್ ಶೆಟ್ಟಿ ವಿರುದ್ಧ ವಾರಂಟ್ ಜಾರಿಯಾಗಿತ್ತು. ವಿನೇಶ್  ವಿರುದ್ಧ ಮುಂಬೈ, ದಾವಣೆಗೆರೆ, ಪುಣೆ, ಹೈದರಬಾದ್,  ಮಂಗಳೂರಿನಲ್ಲಿ ಕೊಲೆ, ಅಕ್ರಮ ಶಸ್ತ್ರಾಸ್ತ್ರ, ಕೊಲೆಯತ್ನ ಸಹಿತ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ