ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ 
ದೇಶ

ಗುಜರಾತ್ ರಾಜ್ಯಸಭೆ ಚುನಾವಣೆ: 3 ಸ್ಥಾನಗಳಲ್ಲಿ ಬಿಜೆಪಿ ಗೆಲುವು, ಪಟೇಲ್ ಸೋಲು ಖಚಿತ: ರೂಪಾನಿ

ಗುಜರಾತ್ ಕಾಂಗ್ರೆಸ್ ಶಾಸಕರ ರೆಸಾರ್ಟ್ ರಾಜಕೀಯದ ಕುರಿತು ಪ್ರತಿಕ್ರಿಯಿಸಿರುವ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ, ಗುಜರಾತ್ ರಾಜ್ಯಸಭಾ...

ಅಹಮದಾಬಾದ್: ಗುಜರಾತ್ ಕಾಂಗ್ರೆಸ್ ಶಾಸಕರ ರೆಸಾರ್ಟ್ ರಾಜಕೀಯದ ಕುರಿತು ಪ್ರತಿಕ್ರಿಯಿಸಿರುವ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ, ಗುಜರಾತ್ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ನ ಅಹ್ಮದ್ ಪಟೇಲ್ ಸೋಲು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ. 
ಭೀಕರ ಪ್ರವಾಹದಿಂದಾಗಿ ಗುಜರಾತ್ ಜನತೆ ಸಾವನ್ನಪ್ಪುತ್ತಿದ್ದರೆ ಅಂತ ಗುಜರಾತ್ ಕಾಂಗ್ರೆಸ್ ಶಾಸಕರು ಬೆಂಗಳೂರಿನ ರೆಸಾರ್ಟ್ ನಲ್ಲಿ ಮೋಜು ಮಸ್ತಿ ಮಾಡುತ್ತಿದ್ದರು ಎಂದು ರೂಪಾನಿ ಕಿಡಿಕಾರಿದರು. ಅಲ್ಲದೆ ಕಾಂಗ್ರೆಸ್ ಶಾಸಕರು ನಂಬಿಕೆಗೆ ಅರ್ಹರಾದವರಲ್ಲ ಎಂದು ಹೇಳಿದರು. 
ಆಗಸ್ಟ್ 8ರಂದು ಗುಜರಾತ್ ರಾಜ್ಯಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ರೆಸಾರ್ಟ್ ನಲ್ಲಿ ಬಿಡುಬಿಟ್ಟಿದ್ದ ಗುಜರಾತ್ 44 ಕಾಂಗ್ರೆಸ್ ಶಾಸಕರು ಬೆಂಗಳೂರಿನಿಂದ ಅಹಮದಾಬಾದ್ ಗೆ ತೆರಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!