ಕೊಚ್ಚಿ: ಕಾಂಗ್ರೆಸ್ ಅಸ್ತಿತ್ವದ ಬಿಕ್ಕಟ್ಟು ಎದುರಿಸುತ್ತಿದೆ ಎಂದು ಪಕ್ಷದ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜೈರಾಮ್ ರಮೇಶ್ ಅವರು ಸೋಮವಾರ ಹೇಳಿದ್ದಾರೆ.
ಕಾಂಗ್ರೆಸ್ ಅಸ್ತಿತ್ವದಂತಹ ತುಂಬಾ ಗಂಭೀರ ಬಿಕ್ಕಟ್ಟು ಎದುರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಮೆಟ್ಟಿ ನಿಲ್ಲಲ್ಲು ಕಾಂಗ್ರೆಸ್ ನಾಯಕರು ಸಾಮೂಹಿಕ ಪ್ರಯತ್ನ ನಡೆಸುವ ಅಗತ್ಯವಿದೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಮೋದಿ ಮತ್ತು ಅಮಿತ್ ಶಾ ವಿರುದ್ಧ ನಾವು ಎಂದಿನಂತೆ ವ್ಯವಹರಿಸಿದರೆ ಯಾವುದೇ ಪ್ರಯೋಜನ ಆಗುವುದಿಲ್ಲ. ಕಾಂಗ್ರೆಸ್ ಅಸ್ತಿತ್ವಕ್ಕಾಗಿ ಕಾರ್ಯಶೈಲಿ ಬದಲಾಗಬೇಕು ಎಂದು ಜೈರಾಮ್ ರಮೇಶ್ ಸಲಹೆ ನೀಡಿದ್ದಾರೆ.
ಕಾಂಗ್ರೆಸ್ ಅಧಿಕಾರದಲ್ಲಿ ಇಲ್ಲದಿದ್ದಾಗ 1996ರಿಂದ 2004ರ ವರೆಗೆ ಮತ್ತು 1977ರಲ್ಲಿ ತುರ್ತು ಪರಿಸ್ಥಿತಿಯ ನಂತರ ನಡೆದ ಚುನಾವಣೆಯಲ್ಲೂ ರಾಜಕೀಯ ಬಿಕ್ಕಟ್ಟನ್ನು ಎದುರಿಸಿದೆ. ಆದರೆ ಅಂದು ಬರೀ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಆದರೆ ಇಂದು ರಾಜಕೀಯ ಅಸ್ತಿತ್ವದ ಬಿಕ್ಕಟು ಸೃಷ್ಟಿಯಾಗಿದೆ. ಪಕ್ಷ ತುಂಬಾ ಗಂಭೀರ ಸಮಸ್ಯೆಯನ್ನು ಎದುರಿಸುತ್ತಿದೆ ಎಂದಿದ್ದಾರೆ.
ಇದೇ ವೇಳೆ ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಕುದುರೆ ವ್ಯಾಪಾರ ನಡೆಸುವ ಭೀತಿಯಿಂದ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿನ ರೆಸಾರ್ಟ್ ಶಿಫ್ಟ್ ಮಾಡಿದ ಗುಜರಾತ್ ಕಾಂಗ್ರೆಸ್ ಕ್ರಮವನ್ನು ರಮೇಶ್ ಸಮರ್ಥಿಸಿಕೊಂಡಿದ್ದು, ಈ ಹಿಂದೆಯೂ ಬಿಜೆಪಿ ಈ ರೀತಿ ತನ್ನ ಶಾಸಕರನ್ನು ರೆಸಾರ್ಟ್ ಕರೆದುಕೊಂಡು ಹೋಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics