ನವದೆಹಲಿ: ಶಾಸಕರನ್ನು ಬಚ್ಚಿಡುವ ಮೂಲಕ ಬಿಜೆಪಿಯ ಕುದುರೆ ವ್ಯಾಪಾರಕ್ಕೆ ತಕ್ಕ ಉತ್ತರ ನೀಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಗೆ ಜೆಡಿಯು ಹೇಳಿದೆ.
ಬಿಜೆಪಿಯ ಕುದುರೆ ವ್ಯಾಪಾರ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಯು ನಾಯಕ ಅಲಿ ಅನ್ವರ್, ಬಿಜೆಪಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಬಿಜೆಪಿ ಬಹಿರಂಗವಾಗಿಯೇ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಬಿಜೆಪಿಗೆ ಹೆದರಿರುವ ಕೆಲವರು ಕರ್ನಾಟಕದಲ್ಲಿ ಅಡಗಿಕೊಳ್ಳುತ್ತಿದ್ದಾರೆ. ಆದರೆ ರಾಜಕೀಯದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದು ಸಾರ್ವಜನಿಕರು ಎಂಬುದನ್ನು ಕಾಂಗ್ರೆಸ್ ಅರ್ಥಮಾಡಿಕೊಳ್ಳಬೇಕು ಎಂದು ಜೆಡಿಯು ನಾಯಕ ಅಲಿ ಅನ್ವರ್ ಹೇಳಿದ್ದಾರೆ.
ಪ್ರತಿಯೊಬ್ಬರ ಕಣ್ಗಳಲ್ಲಿ ದುರ್ಬಲರಾಗಿ ಕಾಣುವವರೇ ಅತ್ಯಂತ ಶಕ್ತಿಶಾಲಿಗಳಾಗಿರುತ್ತಾರೆ. ಬೇರೆಡೆಗೆ ಹೋಗುವುದರಿಂದ ಬಿಜೆಪಿಯ ಕುದುರೆ ವ್ಯಾಪಾರಕ್ಕೆ ತಕ್ಕ ಉತ್ತರ ನೀಡಲು ಸಾಧ್ಯವಿಲ್ಲ ಎಂದು ಜೆಡಿಯು ಅಭಿಪ್ರಾಯಪಟ್ಟಿದೆ.