ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಎಸ್.ಪಿ. ವೈದ್
ಶ್ರೀನಗರ: ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯಿಂದ ಕಾಶ್ಮೀರವನ್ನು ಮುಕ್ತಗೊಳಿಸಲು ನಿಲುವು ತಾಳಿದ್ದೇವೆಂದು ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಎಸ್.ಪಿ. ವೈದ್ ಅವರು ಸೋಮವಾರ ಹೇಳಿದ್ದಾರೆ.
ಪುಲ್ವಾಮ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ 50 ಆರ್'ಆರ್, ಸಿಆರ್ ಪಿಎಫ್ ಪಡೆಗಳು ಜಂಟಿಯಾಗಿ ನಡೆಸಿದ್ದ ಕಾರ್ಯಾಚರಣೆಯಲ್ಲಿ ಓರ್ವ ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರನನ್ನು ಹತ್ಯೆ ಮಾಡಿದೆ.
ಎನ್ ಕೌಂಟರ್ ಕುರಿತಂತೆ ಪ್ರತಿಕ್ರಿಯೆ ನೀಡಿರುವ ವೈದ್ ಅವರು, 2-3 ಉಗ್ರರು ಸಂಬೂರಾ ಪ್ರದೇಶದಲ್ಲಿ ತಮ್ಮ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆಂದು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ನಂತರ ಅವಂತಿಪುರ ಪೊಲೀಸ್ ಹಾಗೂ ಕೇಂದ್ರೀಯ ಸಶಸ್ತ್ರ ಮೀಸಲು ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿಯಿತು. ಗುಂಡಿನ ಕಾಳಗದಲ್ಲಿ ಇಬ್ಬರಿಗೆ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.
ಸ್ಥಳದಲ್ಲಿ ಇಬ್ಬರು ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯವರಾಗಿದ್ದರು. ಮತ್ತೊಬ್ಬ ಸ್ಥಳೀಯ ಉಗ್ರನಾಗಿದ್ದು, ಸ್ಥಳದಲ್ಲಿ ಅಡಗಿ ಕುಳಿತಿದ್ದರು. ಈ ವೇಳೆ ನಡೆಸಲಾದ ಎನ್ ಕೌಂಟರ್ ನಲ್ಲಿ ಉಗ್ರ ಉಮರ್ ಎಂಬಾತನನ್ನು ಹತ್ಯೆ ಮಾಡಲಾಯಿತು ಎಂದಿದ್ದಾರೆ.