ಸಂಗ್ರಹ ಚಿತ್ರ 
ದೇಶ

ಪಾಕಿಸ್ತಾನ: 3 ಉಗ್ರರ ಹತ್ಯೆ, ನಾಲ್ವರು ಉಗ್ರರನ್ನು ಬಂಧನಕ್ಕೊಳಪಡಿಸಿದ ಅಧಿಕಾರಿಗಳು

ಭಾರೀ ಪ್ರಮಾಣಜಲ್ಲಿ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಉಗ್ರರ ಅಡಗು ತಾಣವೊಂದರ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಿ ನಾಲ್ವರು...

ಕರಾಚಿ: ಭಾರೀ ಪ್ರಮಾಣಜಲ್ಲಿ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಉಗ್ರರ ಅಡಗು ತಾಣವೊಂದರ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಿ ನಾಲ್ವರು ಭಯೋತ್ಪಾದಕರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ. 
ಶಿಯಾ ಇಸ್ಮಾಯಿಲಿ ಅಗಾ ಖಾನ್ ಸಮುದಾಯದ ಜಮಾತ್ ಖಾನಾಸ್ ಮತ್ತು ಮಸೀದಿಗಳ ಮೇಲೆ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿದ್ದರು. ಖಚಿತ ಮಾಹಿತಿ ಆಧಾರದ ಮೇರೆಗೆ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಿ ಮೂವರು ಉಗ್ರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನದ ಸಿಂಧ್ ಪೊಲೀಸರು ಹೇಳಿದ್ದಾರೆ. 
ಕಾರ್ಯಾಚರಣೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಉಗ್ರ ನಿಗ್ರಹ ವಿಭಾಗದ ಪೊಲೀಸ್ ಅಧೀಕ್ಷಕ ರಾಜಾ ಖತಾಬ್ ಅವರು, ಕರಾಚಿಯಲ್ಲಿ ಉಗ್ರರ ದಾಳಿ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಈ ಮಾಹಿತಿ ಆಧಾರದ ಮೇರೆಗೆ ಮಚರ್ ಕಾಲೋನಿಯಲ್ಲಿನ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಲಾಗಿತ್ತು. ಈ ವೇಳೆ ಮೂವರು ಉಗ್ರರನ್ನು ಹತ್ಯೆ ಮಾಡಿ, ನಾಲ್ವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ. 
ದಾಳಿ ಬಳಿಕ ಸ್ಥಳದಲ್ಲಿ ರೈಫಲ್ಸ್ ಗಳು, ಪಿಸ್ತೂಲ್ ಗಳು, ಗೃಹ ನಿರ್ಮಿತ ಬಾಂಬ್'ಗಳು ಹಾಗೂ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇತ್ತೀಚೆಗಷ್ಟೇ ಕರಾಚಿಯಲ್ಲಿ ಪೊಲೀಸ್ ಅಧಿಕಾರಿಯ ಹತ್ಯೆ ಪ್ರಕರಣದಲ್ಲು ಇದೇ ಉಗ್ರರು ಭಾಗಿಯಾಗಿದ್ದರು. ಉಗ್ರರು ಅನ್ಸಾರ್-ಅಲ್-ಶರಿಯಾ ಎಂಬ ಹೆಸರಿನಲ್ಲಿ ತಮ್ಮ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದ್ದರು. 
ಉಗ್ರರ ಗುಂಪಿನಲ್ಲಿ ವಿದ್ಯಾವಂತರು ಹಾಗೂ ಮಾಧ್ಯಮಗಳಲ್ಲಿ ಕೆಲಸ ಮಾಡಿದವರೂ ಇದ್ದು, ಕೇವಲ ಪೊಲೀಸ್ ಅಧಿಕಾರಿಗಳನ್ನಷ್ಟೇ ಅಲ್ಲದೆ, ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಭಾರೀ ಪ್ರಮಾಣದ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಖತಾಬ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!