ಲಖನೌ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ವಿವಾದಿತ ಪ್ರದೇಶದಿಂದ ದೂರದಲ್ಲಿ ಬಾಬ್ರಿ ಮಸೀದಿ ನಿರ್ಮಾಣವಾಗಬಹುದು ಎಂದು ಸುಪ್ರೀಂ ಕೋರ್ಟ್ ಗೆ ಶಿಯಾ ವಕ್ಫ್ ಹೇಳಿದೆ.
ವಿವಾದಿತ ಪ್ರದೇಶದಲ್ಲೇ ರಾಮ ಮಂದಿರ ನಿರ್ಮಾಣವಾಗಲಿ, ಮಸೀದಿಯನ್ನು ವಿವಾದಿತ ಪ್ರದೇಶದಿಂದ ದೂರದಲ್ಲಿ ನಿರ್ಮಾಣ ಮಾಡಬಹುದು, ಬಾಬ್ರಿ ಮಸೀದಿ ಪ್ರದೇಶ ತನ್ನ ಆಸ್ತಿಯಾಗಿರುವುದರಿಂದ ಮಾತುಕತೆಯ ಮೂಲಕ ವಿವಾದ ಬಗೆಹರಿಸಿಕೊಳ್ಳಲು ತನಗೆ ಅಧಿಕಾರವಿದೆ ಎಂದು ಶಿಯಾ ವಕ್ಫ್ ಮಂಡಳಿ ಸುಪ್ರೀಂ ಕೋರ್ಟ್ ನಲ್ಲಿ ಪ್ರಮಾಣ ಪತ್ರ ಸಲ್ಲಿಸಿದೆ.
ವಿವಾದಿತ ಭೂಮಿಗೆ ಸಂಬಂಧಿಸಿದ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆ ಮಾಡಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ತ್ವರಿತಗೊಳಿಸಲು ಅಲಹಾಬಾದ್ ಹೈಕೋರ್ಟ್ ಒಪ್ಪಿಗೆ ಸೂಚಿಸಿರುವ ಬೆನ್ನಲ್ಲೇ ಶಿಯಾ ವಕ್ಫ್ ಮಂಡಳಿ ಸುಮಾರು 30 ಪುಟಗಳ ಪ್ರಮಾಣ ಪತ್ರ ಸಲ್ಲಿಸಿರುವುದು ಮಹತ್ವ ಪಡೆದುಕೊಂಡಿದೆ.