ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್
ಪಾಟ್ನ: ಬಿಜೆಪಿ ಹಾಗೂ ಆರ್'ಎಸ್ಎಸ್ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಜೀವ ತೆಗೆಯಲು ಯತ್ನಿಸುತ್ತಿದೆ ಎಂದು ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಮಂಗಳವಾರ ಆರೋಪಿಸಿದ್ದಾರೆ.
ಪ್ರವಾಹ ಪೀಡಿತ ಗುಜರಾತ್ ಭೇಟಿ ವೇಳೆ ರಾಹುಲ್ ಗಾಂಧಿಯವರ ಕಾರಿನ ಮೇಲೆ ದಾಳಿಯಾದ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಲಾಲು, ರಾಹುಲ್ ಗಾಂಧಿಯವರನ್ನು ತಮ್ಮ ಹಾದಿಯಿಂದ ಬದಿಗೆ ಸರಿಸುವ ಸಲುವಾಗಿ ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರು ರಾಹುಲ್ ಗಾಂಧಿಯವರನ್ನು ಹತ್ಯೆ ಮಾಡಲು ಯತ್ನ ನಡೆಸುತ್ತಿದ್ದಾರೆಂದು ಹೇಳಿದ್ದಾರೆ.
ಆ.4 ರಂದು ಪ್ರವಾಹ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಲು ಗುಜರಾತ್'ಗೆ ತೆರಳಿದ್ದ ವೇಳೆ ರಾಹುಲ್ ಗಾಂಧಿಯವರ ಕಾರಿನ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ್ದರು. ಅಲ್ಲದೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪರ ಘೋಷಣೆಗಳನ್ನು ಕೂಗಿದ್ದರು.