ಗಾಂಧಿನಗರ: ಕಾಂಗ್ರೆಸ್, ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿರುವ ಗುಜರಾತ್ ರಾಜ್ಯಸಭೆಯ ಚುನಾವಣೆ ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು, ಮತ ಎಣಿಕೆ ಕಾರ್ಯ ಇನ್ನೂ ಆರಂಭವಾಗಿಲ್ಲ.
ಈ ಮಧ್ಯೆ ಗುಜರಾತ್ ನ ಏಕೈಕ ಜೆಡಿಯು ಶಾಸಕ ಛೋಟು ವಸವ ಅವರು ತಾವು ಕಾಂಗ್ರೆಸ್ ಅಭ್ಯರ್ಥಿ ಅಹಮ್ಮದ್ ಪಟೇಲ್ ಅವರಿಗೆ ಮತ ಹಾಕಿರುವುದಾಗಿ ಮಂಗಳವಾರ ಹೇಳಿದ್ದಾರೆ.
ಆಡಳಿತರೂಢ ಬಿಜೆಪಿ ಸರ್ಕಾರ ಬಡವರಿಗೆ ಮತ್ತು ಬುಡಕಟ್ಟು ಜನಾಂಗಕ್ಕಾಗಿ ಯಾವುದೇ ಕೆಲಸ ಮಾಡಿಲ್ಲ. ಹೀಗಾಗಿ ತಾವು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ.
ವಸವ ಅವರು ಭರುಚ್ ಜಿಲ್ಲೆಯ ಜಗಾಡಿಯಾ ಎಸ್ಟಿ ಮೀಸಲು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಇತ್ತೀಚಿಗಷ್ಟೇ ಅವರ ಪಕ್ಷ ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ.