ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ನೀಡಲಾಗಿರುವ ವಿಶೇಷ ಸ್ಥಾನಮಾನವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಆರ್ಟಿಕಲ್ 370 ಯ ಸುಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಏಪ್ರಿಲ್ 11 ರಂದು ದೆಹಲಿ ಹೈಕೋರ್ಟ್ ತಿರಸ್ಕರಿಸಿತ್ತು. ಈಗ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರಾದ ಕುಮಾರಿ ವಿಜಯಲಕ್ಷ್ಮಿ ಝಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿದೆ.
ರಾಜ್ಯದ ಸಂವಿಧಾನ ಸಭೆ ವಿಸರ್ಜನೆಗೊಂಡ ಬಳಿಕವೂ ಆರ್ಟಿಕಲ್ 370 ಯನ್ನು ಮುಂದುವರೆಸುವುದು ಸಂವಿಧಾನದ ಪ್ರಕಾರ ಸರಿಯಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.