ಪುಲ್ವಾಮ(ಜಮ್ಮು ಮತ್ತು ಕಾಶ್ಮೀರ): ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್ ನಲ್ಲಿ ಭಾರತೀಯ ಸೇನೆ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದು ಈ ದಾಳಿಯಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆಗೈದಿದೆ.
42ನೇ ರಾಷ್ಟ್ರೀಯ ರೈಫಲ್ಸ್ ಮತ್ತು ವಿಶೇಷ ಕಾರ್ಯಾಚರಣೆ ಗುಂಪು ನಡೆಯುತ್ತಿರುವ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತ್ರಾಲ್ ನಲ್ಲಿ ಇನ್ನು ಉಗ್ರರು ಅಡಗಿದ್ದು ಕಾರ್ಯಾಚರಣೆ ಮುಂದುವರೆದಿದೆ. ಗುಂಡಿನ ದಾಳಿ ನಡೆಯುತ್ತಿರುವ ಹಿನ್ನಲೆ ಉಗ್ರರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.