ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿ ಸಂಸದ ಸನ್ವಾರ್ ಲಾಲ್ ಜಾಟ್ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.
62 ವರ್ಷದ ಸನ್ವಾರ್ ಲಾಲ್, ಇಂದು ಬೆಳಗ್ಗೆ 6.15 ಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಜಾಟ್ ಅವರ ಮಿದುಳಿಗೆ ಹಾನಿಯಾಗಿ ವೆಂಟಿಲೇಟರ್ ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಅವರಿಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ನರೇಂದ್ರ ಮೋದಿ ಸರ್ಕಾರದಲ್ಲಿ ಜಾಟ್ ಜಲಸಂಪನ್ಮೂಲಗಳ ರಾಜ್ಯ ಸಚಿವರಾಗಿದ್ದರು.ಜಾಟ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.