ದೇಶ

ಕಾಶ್ಮೀರಿ ಪ್ರತ್ಯೇಕತಾವಾದಿ ಶಬ್ಬೀರ್ ಶಾ ಗೆ 14 ದಿನಗಳ ನ್ಯಾಯಾಂಗ ಬಂಧನ

Shilpa D
ನವದೆಹಲಿ: ಕಾಶ್ಮೀರ ಪ್ರತ್ಯೇಕತಾವಾದಿ  ಮುಖಂಡ ಶಬ್ಬೀರ್ ಶಾ ಗೆ ದೆಹಲಿ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೊಳಪಡಿಸಿದೆ.
ಕಳೆದ 10 ವರ್ಷಗಳ ಹಿಂದೆ ಉಗ್ರರಿಗೆ ಹಣಕಾಸು ಒದಗಿಸಿದ ಆರೋಪದ ಕೇಸ್ ಗೆ ಸಂಬಂಧಿಸಿದಂತೆ ಶಬ್ಬೀರ್ ಶಾ ನನ್ನು ಬಂಧಿಸಲಾಗಿತ್ತು.
ದೆಹಲಿ ಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿ ಸಿದ್ದಾರ್ಥ್ ಶರ್ಮಾ  ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ. ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿ ಹೆಚ್ಚಿನ ವಿಚಾರಣೆಗೊಳಪಡಿಸುವ ಅವಶ್ಯಕತೆಯಿಲ್ಲ ಎಂದು ಕೋರ್ಟ್ ಹೇಳಿದೆ.
ಶಬ್ಬೀರ್ ಶಾ ದೇಶ ಬಿಟ್ಟು ಓಡಿ ಹೋಗುತ್ತಾನೆ ಎಂಬ ಹಿನ್ನೆಲೆಯಲ್ಲಿ ಆಗಸ್ಟ್ 3 ರಂದು ಕೋರ್ಟ್ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಶಕ್ಕೆ ನೀಡಿತ್ತು. ಹಲವು ಹುರಿಯತ್ ಮುಖಂಡರುಗಳ ಬಂಧನದ ನಂತರ ಶಾ ನನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬಂಧಿಸಿದ್ದರು.
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಈ ಹಿಂದೆ ತನಿಖೆಗೆ ಹಾಜರಾಗುವಂತೆ ಹಲವು ಬಾರಿ ಶಾಗೆ ಸಮನ್ಸ್ ಜಾರಿ ಮಾಡಿತ್ತು. ಆದರೆ, ಇದಾವುದಕ್ಕೂ ಶಾ ಪ್ರತಿಕ್ರಿಯೆಗಳನ್ನು ನೀಡದ ಹಿನ್ನಲೆಯಲ್ಲಿ ದೆಹಲಿ ನ್ಯಾಯಾಲಯ ಶಾ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. 
SCROLL FOR NEXT