ಪ್ರಧಾನಮಂತ್ರಿ ನರೇಂದ್ರ ಮೋದಿ
ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಗುಜಾರಾತ್ ರಾಜ್ಯಸಭಾ ಚುನಾವಣೆಯಲ್ಲಿ ಗೆಲವು ಸಾಧಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿಯವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಗುಜರಾತ್ ರಾಜ್ಯಸಭಾ ಚುನಾವಣೆ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿಯವರು ಗುಜರಾತ್ ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಸಚಿವಾಲಯದ ಸಹೋದ್ಯೋಗಿ ಸ್ಮೃತಿ ಇರಾನಿಯವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.
ಅಮಿತ್ ಶಾ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಇಂದಿಗೆ ಮೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಅಮಿತ್ ಶಾ ಅವರಿಗೆ ಪ್ರಧಾನಿ ಮೋದಿಯವರು ಶುಭಾಶಯಗಳನ್ನು ಕೋರಿದ್ದಾರೆ.
ಅಮಿತ್ ಶಾ ಅವರು ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ಆಯ್ಕೆಯಾಗಿ ಇಂದಿಗೆ ಮೂರು ವರ್ಷಗಳು ಪೂರ್ಣಗೊಂಡಿದೆ. ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಬುಡ ಮತ್ತಷ್ಟು ವಿಸ್ತಾರಗೊಂಡಿದೆ. ದೇಶ ಕಟ್ಟುವ ನಮ್ಮ ಗುರಿ ಮತ್ತಷ್ಟು ವಿಸ್ತಾರಗೊಂಡಿದೆ. ಅಮಿತ್ ಶಾ ಅವರಿಗೆ ಈ ಮೂಲಕ ಶುಭಾಶಯಗಳನ್ನು ಕೋರುತ್ತಿದ್ದೇನೆಂದು ತಿಳಿಸಿದ್ದಾರೆ.