ಸಮಾಜವಾದಿ ಪಕ್ಷದ ಮತ್ತೊಬ್ಬ ಎಂಎಲ್ ಸಿ ರಾಜಿನಾಮೆ, ಅಖಿಲೇಶ್ ಗೆ ತೀವ್ರ ಹಿನ್ನಡೆ
ಸಮಾಜವಾದಿ ಪಕ್ಷದ ಉತ್ತರ ಪ್ರದೇಶ ವಿಧಾನ ಪರಿಷತ್ ಸದಸ್ಯ ಅಶೋಕ್ ಬಾಜ್ಪಾಯಿ ಅವರು ಬುಧವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ....
ಲಖನೌ: ಸಮಾಜವಾದಿ ಪಕ್ಷದ ಉತ್ತರ ಪ್ರದೇಶ ವಿಧಾನ ಪರಿಷತ್ ಸದಸ್ಯ ಅಶೋಕ್ ಬಾಜ್ಪಾಯಿ ಅವರು ಬುಧವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಇದರೊಂದಿಗೆ ಇತ್ತೀಚಿಗೆ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜಿನಾಮೆ ನೀಡಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಎರಡು ದಿನಗಳ ಹಿಂದಷ್ಟೇ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಪಕ್ಷ ಬಿಡುವವರು ತಿರುಗಿ ನೋಡದೆ ಹೋಗ್ತಾ ಇರಿ ಎಂದು ಗುಡುಗಿದ್ದರು. ಇದರ ಬೆನ್ನಲ್ಲೇ ಈಗ ಮತ್ತೊಬ್ಬ ಎಂಎಲ್ ಸಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಸಮಾಜವಾದಿ ಪಕ್ಷದ ಮೂವರು ಎಂಎಲ್ ಸಿಗಳು ಇತ್ತೀಚಿಗೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದು, ಅಶೋಕ್ ಬಾಜ್ಪಾಯಿ ಸಹ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ವಿಧಾನ ಪರಿಷತ್ ಸಭಾಪತಿ ರಮೇಶ್ ಯಾದವ್ ಅವರಿಗೆ ರಾಜಿನಾಮೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್ ಬಾಜ್ಪಾಯಿ ಅವರು, ನಮ್ಮ ನೇತಾಜಿ ಮುಲಾಯಂ ಸಿಂಗ್ ಯಾದವ್ ಅವರೇ ಪಕ್ಷದಲ್ಲಿ ಸಕ್ರಿಯವಾಗಿಲ್ಲ. ಅಲ್ಲದೆ ಪಕ್ಷದಲ್ಲಿ ನನಗೆ ಹೆಚ್ಚು ಮಾನ್ಯತೆ ನೀಡುತ್ತಿಲ್ಲ. ಹೀಗಾಗಿ ನಾನು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.