ಬೃಹತ್ ಮುಂಬೈ ಮಹಾನಗರ ಪಾಲಿಕೆ 
ದೇಶ

ನಗರ ಪಾಲಿಕೆಯ ಶಾಲೆಗಳಲ್ಲಿ ವಂದೇ ಮಾತರಂ ಕಡ್ಡಾಯ: ಬಿಎಂಸಿ ಪ್ರಸ್ತಾವನೆ

ನಗರ ಪಾಲಿಕೆ ನಡೆಸುತ್ತಿರುವ ಎಲ್ಲಾ ಶಾಲೆಗಳಲ್ಲಿ ರಾಷ್ಟ್ರೀಯ ಹಾಡು 'ವಂದೇ ಮಾತರಂ' ಕಡ್ಡಾಯವಾಗಿ ಹಾಡಿಸಬೇಕೆಂದು ಬೃಹತ್ ಮುಂಬೈ ಮಹಾನಗರ...

ಮುಂಬೈ: ನಗರ ಪಾಲಿಕೆ ನಡೆಸುತ್ತಿರುವ ಎಲ್ಲಾ ಶಾಲೆಗಳಲ್ಲಿ ರಾಷ್ಟ್ರೀಯ ಹಾಡು 'ವಂದೇ ಮಾತರಂ' ಕಡ್ಡಾಯವಾಗಿ ಹಾಡಿಸಬೇಕೆಂದು ಬೃಹತ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಪ್ರಸ್ತಾವನೆ ತಂದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 
ವಂದೇ ಮಾತರಂ ಕಡ್ಡಾಯ ಕುರಿತಂತೆ ಅಂತಿಮ ನಿರ್ಧಾರಕ್ಕೆ ಬಿಎಂಸಿ ಪ್ರಸ್ತಾವನೆಯನ್ನು ಮಹಾರಾಷ್ಟ್ರ ಸರ್ಕಾರಕ್ಕೆ ಕಳುಹಿಸಿದೆ ಎಂದು ಮುಂಬೈ ಮೇಯರ್ ವಿಶ್ವನಾಥ್ ಮಹದೇಶ್ವರ್ ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. 
ತಮಿಳುನಾಡಿನ ಶಾಲಾ ಕಾಲೇಜುಗಳು ಮತ್ತು ಕಚೇರಿಗಳಲ್ಲಿ ವಂದೇ ಮಾತರಂ ಅನ್ನು ಕಡ್ಡಾಯಗೊಳಿಸಿ ಮದ್ರಾಸ್ ಹೈಕೋರ್ಟ್ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಮಹಾರಾಷ್ಟ್ರದಲ್ಲೂ ಬಿಜೆಪಿ ಶಾಸಕರು ಮಹಾರಾಷ್ಟ್ರದಲ್ಲೂ ವಂದೇ ಮಾತರಂ ಕಡ್ಡಾಯಗೊಳಿಸುವಂತೆ ಆಗ್ರಹಿಸಿದ್ದರು. 
2017ರ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ವಂದೇ ಮಾತರಂ ಕಡ್ಡಾಯಗೊಳಿಸುವ ಕುರಿತಂತೆ ಭಾರತೀಯ ಸಂವಿಧಾನದಲ್ಲಿ ರಾಷ್ಟ್ರೀಯ ಹಾಡಿನ ಪರಿಕಲ್ಪನೆ ಇಲ್ಲ ಎಂದು ಹೇಳಿತ್ತು. ನಂತರ 2017ರ ಏಪ್ರಿಲ್ ನಲ್ಲಿ ಸುಪ್ರೀಂ ಕೋರ್ಟ್ ಶಾಲಾ ಕಾಲೇಜುಗಳಲ್ಲಿ ವಂದೇ ಮಾತರಂ ರಾಷ್ಟ್ರೀಯ ಹಾಡನ್ನು ಕಡ್ಡಾಯಗೊಳಿಸುವ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ