ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಶರದ್ ಯಾದವ್ ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಸ್ವಾತಂತ್ರ್ಯವಿದೆ: ನಿತೀಶ್ ಕುಮಾರ್

ಎಲ್ಲಿಗೆ ಬೇಕಾದರೂ ಹೋಗಲು, ಯಾವುದೇ ದಾರಿ ಆಯ್ಕೆ ಮಾಡಿಕೊಳ್ಳಲು ಶರದ್ ಯಾದವ್ ಅವರಿಗೆ ಸಂಪೂರ್ಣ ಸ್ವಾತಂತ್ರ್ಯವಿದೆ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್...

ನಿತೀಶ್ ಕುಮಾರ್ ಮತ್ತು ಶರದ್ ಯಾದವ್
Shilpa D
Updated On : 11 Aug 2017, 7:18 am
ನವದೆಹಲಿ: ಯಾವುದೇ ನಿರ್ಧಾರ ಕೈಗೊಳ್ಳಲು ಜೆಡಿಯು ನಾಯಕ ಶರದ್ ಯಾದವ್ ಗೆ ಎಲ್ಲಾ ರೀತಿಯ ಸ್ವಾತಂತ್ರ್ಯವಿದೆ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ.
ಜೆಡಿಯು ಮತ್ತು ಬಿಜೆಪಿ ಮೈತ್ರಿಗೆ ಶರದ್ ಯಾದವ್ ವಿರೋಧ ವ್ಯಕ್ತ ಪಡಿಸಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ನೀತೀಶ್ ಕುಮಾರ್, ಎಲ್ಲಿಗೆ ಬೇಕಾದರೂ ಹೋಗಲು, ಯಾವುದೇ ದಾರಿ ಆಯ್ಕೆ ಮಾಡಿಕೊಳ್ಳಲು ಶರದ್ ಯಾದವ್ ಅವರಿಗೆ ಸಂಪೂರ್ಣ ಸ್ವಾತಂತ್ರ್ಯವಿದೆ ಎಂದು ತಿಳಿಸಿದ್ದಾರೆ.
ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್ ಎಲ್ಲರ ಒಮ್ಮತದೊಂದಿಗೆ ಪಕ್ಷ ನಿರ್ಧಾರ ಕೈಗೊಳ್ಳಲಿದೆ, ಹಾಗೆಯೇ ಅವರ ಸ್ವಂತ ನಿರ್ಧಾರ ತೆಗೆದುಕೊಳ್ಳಲು ಅವರಿಗೆ ಹಕ್ಕಿದೆ ಎಂದು ಹೇಳಿದ್ದಾರೆ. 

Advertisement

Advertisement

ಜೆಡಿಯು ಮಾಜಿ ಅಧ್ಯಕ್ಷ ಶರದ್ ಯಾದವ್ ತಾವು ಇನ್ನೂ ಮಹಾ ಘಟಬಂಧನ್ ಜೊತೆಯಲ್ಲಿಯೇ ಇರುವುದಾಗಿ ಹೇಳಿದ ಬೆನ್ನಲ್ಲೇ ನಿತೀಶ್ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ, 2015 ರ ಚುನಾವಣೆಯಲ್ಲಿ  11 ಕೋಟಿ ಮಂದಿ ನೀಡಿರುವ ಜನಾದೇಶಕ್ಕೆ ನಾನು ಬದ್ದನಾಗಿದ್ದೇನೆ ಎಂದು ಪಾಟ್ನಾ ವಿಮಾನ ನಿಲ್ದಾಣದಲ್ಲಿ ಶರದ್ ಯಾದವ್ ಹೇಳಿದ್ದರು. 
ಕಳೆದ ತಿಂಗಳು ನಿತೀಶ್ ಕುಮಾರ್ ಆರ್ ಜೆಡಿ ಜೊತೆಗಿನ ಮೈತ್ರಿ ಮುರಿದುಕೊಂಡು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿ, ಬಿಜೆಪಿ ಬೆಂಬಲದೊಂದಿಗೆ ಮತ್ತೆ ಸರ್ಕಾರ ರಚಿಸಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ನಿತೀಶ್ ನಡೆಗೆ ಶರದ್ ಯಾದವ್ ತೀವ್ರ ವಿರೋಧ ವ್ಯಕ್ತ ಪಡಿಸಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments