ನಾಶಿಕ್ : ಬಲೂನ್ ನುಂಗಿದ 8 ತಿಂಗಳ ಮಗು ದಾರುಣ ಸಾವು
ರಬ್ಬರ್ ಬಲೂನ್ ನುಂಗಿದ ಕಾರಣ ಉಸಿರಾಟಕ್ಕೆ ತೊಂದರೆಯಾಗಿ 8 ತಿಂಗಳ ಗಂಡು ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ....
ನಾಶಿಕ್: ರಬ್ಬರ್ ಬಲೂನ್ ನುಂಗಿದ ಕಾರಣ ಉಸಿರಾಟಕ್ಕೆ ತೊಂದರೆಯಾಗಿ 8 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.
ನಾಶಿಕ್ ನ ಹನುಮಾನ್ ನಗರದ ಮನೆಯಲ್ಲಿ ಆಟವಾಡುತ್ತಿದ್ದ ಮಗು ನೆಲದ ಮೇಲೆ ಬಿದ್ದಿದ್ದ ಬಲೂನ್ ತೆಗೆದುಕೊಂಡು ನುಂಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಗುವನ್ನು ಪರೀಕ್ಷಿಸಿದ ವೈದ್ಯರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಮಗು ನುಂಗಿದ ಬಲೂನ್, ಉಸಿರಾಟದ ಪೈಪ್ ಗೆ ಜಾರಿದ್ದರಿಂದ ಉಸಿರುಗಟ್ಟಿ ಮಗು ಸಾವನ್ನಪ್ಪಿದೆ ಎಂದು ವೈದ್ಯರು ಹೇಳಿದ್ದಾರೆ.
ಅಂಬಾಡ್ ಪೊಲೀಸರು ಇದೊಂದು ಆಕಸ್ಮಿಕ ಸಾವಿನ ಪ್ರಕರಣ ಎಂದು ದೂರು ದಾಖಲಿಸಿಕೊಂಡಿದ್ದಾರೆ. ಮಗುವಿನ ಪೋಷಕರು ಉತ್ತರ ಪ್ರದೇಶ ಮೂಲದವರಾಗಿದ್ದು, ನಾಸಿಕ್ ನಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.