ನಿಯೋಜಿತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು 
ದೇಶ

ದೇಶದ 13ನೇ ಉಪ ರಾಷ್ಟ್ರಪತಿಗಳಾಗಿ ವೆಂಕಯ್ಯನಾಯ್ಡು ಇಂದು ಪ್ರಮಾಣ ವಚನ ಸ್ವೀಕಾರ

ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ವೆಂಕಯ್ಯನಾಯ್ಡು ಅವರು ದೇಶದ 13ನೇ ಉಪ ರಾಷ್ಟ್ರಪತಿಗಳಾಗಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನವದೆಹಲಿ: ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ವೆಂಕಯ್ಯನಾಯ್ಡು ಅವರು ದೇಶದ 13ನೇ ಉಪ ರಾಷ್ಟ್ರಪತಿಗಳಾಗಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

68 ವರ್ಷ ಹಿರಿಯ ರಾಜಕಾರಣಿ ಇತ್ತೀಚೆಗೆ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಮೈತ್ರೀಕೂಟದ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಅವರ ವಿರುದ್ದಧ ಗೆಲುವು ಸಾಧಿಸಿ, ಉಪ ರಾಷ್ಟ್ಪಪತಿ ಹುದ್ದೆಗೇರಿದ್ದಾರೆ. ಈ ಹಿಂದೆ  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದಲ್ಲಿ ಮಾಹಿತಿ ಮತ್ತು ಪ್ರಸಾರ ಖಾತೆಯ ಸಚಿವರಾಗಿ ನಾಯ್ಡು ಕಾರ್ಯ ನಿರ್ವಹಿಸಿದ್ದರು.

ಇಂದು ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ವೆಂಕಯ್ಯ ನಾಯ್ಡು ಅವರು ಪ್ರಮಾಣ ವಚನ ಸ್ವೀಕರಿಸಲಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವೆಂಕಯ್ಯ ನಾಯ್ಡು ಅವರಿಗೆ  ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

ರಾಷ್ಟ್ರಪತಿ ಭವನದತ್ತ ವೆಂಕಯ್ಯನಾಯ್ಡು

ಇನ್ನು ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನಲೆಯಲ್ಲಿ ನಿಯೋಜಿತ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಈಗಾಗಲೇ ರಾಷ್ಟ್ರಪತಿ ಭವನದತ್ತ ಮುಖ ಮಾಡಿದ್ದು, ಬೆಳಗ್ಗೆ 8.30ಕ್ಕೆ ಮಹಾತ್ಮಾ ಗಾಂಧಿ ಸಮಾಧಿ  ಇರುವ ರಾಜ್ ಘಾಟ್ ಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಬೆಳಗ್ಗೆ 9.00 ಗಂಟೆಗೆ ದೀನದಯಾಳ್ ಉಪಾಧ್ಯಾಯ್ ಮಾರ್ಗ್ ಗೆ ತೆರಳಿ ನಮನ ಸಲ್ಲಿಸಿ, ಬಳಿಕ ಪಟೇಲ್ ಚೌಕ್ ನಲ್ಲಿರುವ ಸರ್ದಾರ್ ವಲ್ಲಭಭಾಯ್ ಪಟೇಲ್  ಸಮಾಧಿಗೆ ತೆರಳಿ ನಾಯ್ಡು ಪುಷ್ಪನಮನ ಸಲ್ಲಿಸಿದರು.

ಬೆಳಗ್ಗೆ 10 ಗಂಟೆಗೆ ರಾಷ್ಟ್ರಪತಿ ಭವನಕ್ಕೆ ಆಗಮಿಸಲಿರುವ ವೆಂಕಯ್ಯ ನಾಯ್ಡು ಅವರು ದೇಶದ 13ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಟನ ಸ್ವೀಕರಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ